ರಾಯಚೂರು: ಸರ್ಕಾರಿ ನೌಕರರ ಮುಷ್ಕರದಲ್ಲಿ (Government Employee Strike) ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಮನೆಗೆ ತೆರಳುತ್ತಿದ್ದಂತೆಯೇ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.
ಸಾಕ್ಷರತಾ ಇಲಾಖೆ ಕಾರ್ಯಕ್ರಮದ ಸಂಯೋಜಕ ಯಲ್ಲಪ್ಪ ಜಾಲಿಬೆಂಚಿ (54) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇವರು ಎಸ್‌ಟಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿದ್ದು, ಬುಧವಾರ ನಡೆದ ಸರ್ಕಾರಿ ನೌಕರರ ಮುಷ್ಕರದಲ್ಲಿ ಭಾಗವಹಿಸಿ, ಮನೆಗೆ ತೆರಳಿದ ಬಳಿಕ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಇದನ್ನೂ ಓದಿ: ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ
ಯಲ್ಲಪ್ಪ ಅವರಿಗೆ ಹೃದಯಾಘಾತವಾಗುತ್ತಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮಧ್ಯಂತರ ರಿಲೀಫ್ – ಷರತ್ತು ಏನು?