ಬೆಂಗಳೂರು: ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ನೀಡಲಾಗಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಹೆಚ್ಚಳ ಮಾಡಲಾಗಿದ್ದು, ಶೇ.4.35 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಆದರೆ ರಾಜ್ಯ ಪೋಲಿಸರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎನ್ನುವಂತಾಗಿದ್ದು, ದೀಪಾವಳಿಗೂ ಔರಾದ್ಕರ್ ವರದಿ ಜಾರಿಯಾಗಿಲ್ಲ ಎಂಬ ಬೇಸರ ಒಂದು ಕಡೆ ಮನೆಮಾಡಿದೆ. ಈ ಮೂಲಕ ರಾಜ್ಯ ಪೊಲೀಸರಿಗೆ ಸರ್ಕಾರ ಶಾಕ್ ಕೊಟ್ಟಿದೆ.
Advertisement
Advertisement
ಕಷ್ಟ ಪರಿಹಾರ ಭತ್ಯೆಯನ್ನು 1 ಸಾವಿರ ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 1ರಿಂದ ಅನ್ವಯವಾಗುವಂತೆ ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಔರಾದ್ಕರ್ ವರದಿ ಜಾರಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಪೋಲೀಸರಿಗೆ ಸ್ವಲ್ಪ ಮಟ್ಟಿಗೆ ಬೇಸರವಾಗಿದೆ. ಆದರೆ ಜಮೇದಾರ್, ಪೊಲೀಸ್ ಪೇದೆ, ಮುಖ್ಯ ಪೇದೆ, ಎಎಸ್‍ಐ, ಎಸ್‍ಐಗಳಿಗೆ 1 ಸಾವಿರ ರೂ. ರಿಸ್ಕ್ ಅಲೋಯೆನ್ಸ್(ಕಷ್ಟ ಪರಿಹಾರ ಭತ್ಯೆ) ಹೆಚ್ಚಳ ಮಾಡುವ ಮೂಲಕ ಸ್ವಲ್ಪ ಮಟ್ಟಿಗೆ ಖುಷಿ ಪಡಿಸಿದೆ.
Advertisement
ಜಮೇದಾರ್, ಮುಖ್ಯ ಪೇದೆ, ಎಎಸ್‍ಐ, ಎಸ್‍ಐಗಳಿಗೆ ಈ ಹಿಂದೆ 1 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ಇತ್ತು. ಈಗ 2 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ಸಿಗಲಿದೆ. ಪೇದೆಗಳಿಗೆ 2 ಸಾವಿರ ಕಷ್ಟ ಪರಿಹಾರ ಭತ್ಯೆ ಇತ್ತು, ಈಗ 3 ಸಾವಿರ ಭತ್ಯೆ ಸಿಗಲಿದೆ. ಅಲ್ಲದೆ ಹೊಸ ಪೊಲೀಸ್ ಇನ್ಸ್‍ಪೆಕ್ಟರ್ ಗಳಿಗೂ 1 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.