ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರ್ಕಾರ ಶಾಕ್ ನೀಡಿದೆ.
ವಿಕಾಸಸೌಧದಲ್ಲಿ ಇಂದು ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.
Advertisement
Advertisement
ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ ಮಾಡಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಕೋರ್ಡಿನೇಷನ್ ಸಿಂಪಲ್ ಮಾಡುವ ಬಗ್ಗೆ ಚರ್ಚೆ ಆಗಿದೆ ಎಂದರು. ಇದನ್ನೂ ಓದಿ: ಆಷಾಢ ಮಾಸದಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನ್ಯೂ ರೂಲ್ಸ್
Advertisement
Advertisement
ಈವರೆಗೂ ಸರ್ಕಾರಿ ಸೀಟುಗಳಿಗೆ ಮಾತ್ರ ಸಿಇಟಿ ನಡೆಯುತ್ತಿತ್ತು. ಖಾಸಗಿ ಸೀಟುಗಳಿಗೆ ಕಾಮಿಡ್ ಕೆ ಸೀಟು ಮಾಡಲಾಗುತ್ತಿತ್ತು. ಇದೀಗ ಸಿಇಟಿ ಮತ್ತು ಕಾಮೆಡ್ ಕೆ ಎರಡನ್ನೂ ಒಟ್ಟಿಗೆ ನಡೆಸಲು ಸಮ್ಮತಿ ನೀಡಿದ್ದಾರೆ. ಹಾಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಅಂತ ಚರ್ಚೆ ಮಾಡಿದ್ದೇವೆ. ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪ್ರತ್ಯೇಕ ಪರೀಕ್ಷೆ ಇರಲಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ. ಕಾಮೆಡ್-ಕೆ, ಸಿಇಟಿ ಒಟ್ಟಿಗೆ ಏಕರೂಪದ ಸಿಇಟಿ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದು ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.
ಕೊರೊನಾ ಹಿನ್ನಲೆ ಎರಡು ವರ್ಷಗಳ ಕಾಲ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಹೀಗಾಗಿ ಶುಲ್ಕ ಹೆಚ್ಚಳಕ್ಕೆ ಖಾಸಗಿ ಕಾಲೇಜುಗಳು ಬೇಡಿಕೆ ಇಟ್ಟಿದ್ದರು. 20-25% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ರು. ನಾವು 10% ಶುಲ್ಕ ಹೆಚ್ವಳಕ್ಕೆ ಅನುಮತಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಕೂಲಿ ಕೆಲಸ ಮಾಡಿ ಕೋಟಿ-ಕೋಟಿ ಸಂಪಾದನೆ ಮಾಡ್ತಿದ್ದ ಕೋಟ್ಯಧಿಪತಿ ಜೈಲುಪಾಲು
Live Tv