ನವದೆಹಲಿ: 2019ರ ಏರೋ ಇಂಡಿಯಾ ಏರ್ ಶೋ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಮೂಲಕ ಉತ್ತರ ಪ್ರದೇಶದ ಲಕ್ನೋಗೆ ಏರ್ ಶೋ ಸ್ಥಳಾಂತರವಾಗಲಿದೆ ಎನ್ನುವ ಸುದ್ದಿಗೆ ಪೂರ್ಣವಿರಾಮ ಬಿದ್ದಿದೆ.
ಲಕ್ನೋದಲ್ಲಿ ಏರ್ ಶೋ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇಂದ್ರದ ಮೇಲೆ ಒತ್ತಡ ಹಾಕಿದ್ದರು. ಹೀಗಾಗಿ ಕೇಂದ್ರ ಸರ್ಕಾರ ಲಕ್ನೋದಲ್ಲಿ ನಡೆಸಲು ಸಿದ್ಧತೆ ನಡೆಸಿದೆ ಎನ್ನುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.
Advertisement
Advertisement
ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬೆಂಗಳೂರು ನಗರದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ವರ್ಗಾಯಿಸುವ ಕುರಿತು ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಏರ್ ಶೋ ನಡೆಸಲು ವಿವಿಧ ರಾಜ್ಯಗಳಿಂದ ಪ್ರಸ್ತಾಪ ಬಂದಿದೆ. ಆದರೆ ಅಂತಿಮವಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ಈ ಎಲ್ಲ ಕಾರಣದಿಂದ ಏರ್ ಶೋ ಬೆಂಗಳೂರಿನಲ್ಲಿ ನಡೆಯುತ್ತಾ ಎನ್ನುವ ಅನುಮಾನ ಎದ್ದಿತ್ತು.
Advertisement
Advertisement
ಕೇಂದ್ರ ಸರ್ಕಾರ 2019ರ ಫೆಬ್ರವರಿ 20-24ರ ವರೆಗೆ ಮೆಗಾ ಏರ್ ಶೋ ನಡೆಸಲು ಸಿದ್ಧತೆ ನಡೆಸಿದೆ.. 1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ಆಯೋಜನೆಯಾಗುತ್ತಿದೆ.
ಈ ಹಿಂದೆ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಏರ್ ಶೋವನ್ನು ಗೋವಾದಲ್ಲಿ ನಡೆಸಲು ಉತ್ಸುಕರಾಗಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಕನ್ನಡಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಮನೋಹರ್ ಪರಿಕ್ಕರ್ ಅವರೇ ಗೋವಾದಲ್ಲಿ ಏರ್ ಶೋ ನಡೆಯುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿ ವಿಚಾರವನ್ನು ತಣ್ಣಗೆ ಮಾಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
"I thank Minister of Defence and Govt of India for choosing UP for its defence corridor. I request Raksha Mantri to host the Aero India show in UP."
-UP CM Shri @myogiadityanath #UPDefenceCorridor pic.twitter.com/yDdU4GRWFa
— Defence Production India (@DefProdnIndia) August 11, 2018