ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಲಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಲಿ ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳ ಮೂಲಕ ಉತ್ತೇಜನ ನೀಡುತ್ತಿದೆ. ಉದ್ಯಮಶೀಲ ಮಹಿಳೆಯರು ಬೆಂಗಳೂರಿನ ಆಚೆಗೂ ಉದ್ಯಮಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ (M.B.Patil) ಕರೆ ನೀಡಿದ್ದಾರೆ.
ಶನಿವಾರ ಇಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಮಹಿಳಾ ಉದ್ಯಮಿಗಳ ಮಹಾಒಕ್ಕೂಟವಾದ ʼಉಬುಂಟುʼ ಇದನ್ನು ಏರ್ಪಡಿಸಿತ್ತು. ಇದನ್ನೂ ಓದಿ: ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಕೆ ಶಿವಕುಮಾರ್
Advertisement
Advertisement
ರಾಜ್ಯದ ಕೈಗಾರಿಕಾ ನೀತಿಯಲ್ಲಿ ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಹಂಚುತ್ತಿರುವ ನಿವೇಶನದಲ್ಲಿ ಮಹಿಳಾ ಉದ್ಯಮಿಗಳಿಗೆ ಶೇ.5 ರಷ್ಟು ಮೀಸಲಾತಿ ಇದೆ. ಜೊತೆಗೆ ಕೆಎಸ್ಸೆಸೈಡಿಸಿಯಲ್ಲೂ ಜಮೀನು ಹಂಚಿಕೆಯಲ್ಲಿ ಇದೇ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹೂಡಿಕೆ ಸಬ್ಸಿಡಿಯಾಗಿ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಮತ್ತು ವಿದ್ಯುತ್ ಬಿಲ್ ಮೇಲೆ ಗರಿಷ್ಠ ನಾಲ್ಕು ವರ್ಷಗಳ ವಿನಾಯಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
Advertisement
ರಾಜ್ಯವು ಮಹಿಳೆಯರನ್ನು ಕೈಗಾರಿಕಾ ರಂಗದಲ್ಲಿ ಮೊದಲಿನಿಂದಲೂ ಪ್ರೋತ್ಸಾಹಿಸುತ್ತಿದೆ. ತಂತ್ರಜ್ಞಾನ ಪರಿಪೋಷಣಾ ಕೇಂದ್ರ, ತಂತ್ರಜ್ಞಾನ ಅಳವಡಿಕೆ ಇವುಗಳಲ್ಲೂ ಅರ್ಧದಷ್ಟು ಮೊತ್ತವನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳೆನೀರು ಸಂಗ್ರಹಣೆ, ತ್ಯಾಜ್ಯ ನೀರು ಮರುಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗಳಿಗೂ ಪ್ರೋತ್ಸಾಹ ಕೊಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ
Advertisement
ಮಹಿಳೆಯರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ, ಕೆಎಸ್ಎಫ್ಸಿ ಮೂಲಕ ಗರಿಷ್ಠ 2 ಕೋಟಿ ರೂ. ವರೆಗೂ ಶೇ.14 ರಷ್ಟು ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಕೊಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಮಹಿಳೆಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಸಾಲಕ್ಕೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಐದು ವರ್ಷಗಳವರೆಗೆ ಶೇ.10 ರಷ್ಟು ಬಡ್ಡಿಯನ್ನು ತಾನೇ ಪಾವತಿಸುತ್ತದೆ ಎಂದು ಸಚಿವರು ನುಡಿದರು.
ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರವು ಒತ್ತು ಕೊಟ್ಟಿದೆ. ಜೊತೆಗೆ ಕೌಶಲ್ಯಾಭಿವೃದ್ಧಿಗೂ ಗಮನ ಹರಿಸಲಾಗಿದೆ. ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಹಲವು ಸಾಮಾಜಿಕ ಆಶಯಗಳನ್ನೂ ನನಸು ಮಾಡಿಕೊಳ್ಳುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ಕೆ.ರತ್ನಪ್ರಭಾ, ಉದ್ಯಮಿಗಳಾದ ಉಮಾ ರೆಡ್ಡಿ, ರಾಜಲಕ್ಷ್ಮಿ, ಲತಾ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಈ ಮೂರು ದಿನ ಕರೆಂಟ್ ಬಿಲ್ ಕಟ್ಟೋಕೆ ಆಗಲ್ಲ – ನವೆಂಬರ್ ಅಂತ್ಯಕ್ಕೆ ವಿದ್ಯುತ್ ದರ ಏರಿಕೆ ಸಾಧ್ಯತೆ?