ರಾಯಚೂರು: ಏಮ್ಸ್ (AIIMS) ಹೋರಾಟ 460ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Dr Sharana Praksh Patil) ಭೇಟಿ ನೀಡಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ನಮ್ಮ ಸಹಕಾರವಿದೆ. ಪಕ್ಷ ಭೇದ ಮರೆತು ರಾಯಚೂರಿಗೆ (Raichur) ಏಮ್ಸ್ ತರಲು ಒಗ್ಗಟ್ಟಾಗಿ ಪ್ರಯತ್ನಿಸಬೇಕಿದೆ ಎಂದು ಹೇಳಿದರು.
ಜಿಲ್ಲೆಗೆ ಏಮ್ಸ್ ತರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ (Siddaramaiah) ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲೂ ರಾಯಚೂರಿಗೆ ಏಮ್ಸ್ ತರುವ ಭರವಸೆ ನೀಡಿದ್ದೇವೆ ಎಂದರು. ಕಲಬುರಗಿಗೆ ಏಮ್ಸ್ ಬೇಕು ಎಂದಿದ್ದ ಪ್ರಿಯಾಂಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಅವರು, ಪ್ರಿಯಾಂಕ್ ಖರ್ಗೆಗೂ ರಾಯಚೂರಿಗೆ ಏಮ್ಸ್ ಬರಬೇಕು ಅನ್ನೋದಿದೆ. ಅವರ ಜೊತೆಗೆ ಮಾತನಾಡಿದ್ದೇನೆ. ಅವರ ಹೇಳಿಕೆಯಿಂದ ಯಾವುದೇ ಗೊಂದಲ ಸೃಷ್ಟಿಸುವುದು ಬೇಡ ಎಂದರು. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ
ಕೇಂದ್ರಕ್ಕೆ ನಿಯೋಗ ಹೋಗಲು ಸಮಯ ಹೊಂದಾಣಿಕೆಯಾಗಿಲ್ಲ. ಶೀಘ್ರದಲ್ಲೇ ಕೇಂದ್ರಕ್ಕೆ ನಿಯೋಗ ಹೋಗಿ ಒತ್ತಾಯ ಮಾಡಲಿದ್ದೇವೆ ಎಂದು ಹೇಳಿದರು. ಕಳೆದ 460 ದಿನಗಳಿಂದ ಏಮ್ಸ್ ಹೋರಾಟ ಸಮಿತಿ ನಿರಂತರವಾಗಿ ಹೋರಾಟ ನಡೆಸಿದ್ದು, ಏಮ್ಸ್ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಬೇಡಿ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಿ ಎಂದು ಏಮ್ಸ್ ಹೋರಾಟಗಾರರು ಸಚಿವರಿಗೆ ಒತ್ತಾಯಿಸಿದರು. ಇದನ್ನೂ ಓದಿ: ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ: ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಮತ್ತೆ ಸಿಗೋಣ ಎಂದಿದ್ದ ಮೋದಿಗೆ ಖರ್ಗೆ ಟಾಂಗ್
Web Stories