ಬೆಂಗಳೂರು: ಸರ್ಕಾರಿ ನೌಕರರು ಇತ್ತಿಚೀನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಒಂದು ಪಕ್ಷದ ಪರ ಅಥವಾ ವಿರೋಧವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಸರ್ಕಾರಿ ನೌಕರರ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಕಡಿವಾಣ ಹಾಕಲು ಮುಂದಾಗಿದೆ.
Advertisement
ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥ ಮನೋಭಾವವನ್ನು ಹೊಂದಿರಬೇಕು. ಜೊತೆಗೆ ಯಾವುದೇ ಪಕ್ಷದ ಪರ ಅಥವಾ ವಿರೋಧವಾಗಿ ಹೇಳಿಕೆ ಕೊಡುವುದಾಗಲಿ ಪಕ್ಷಗಳ ಪರ ಗುರುತಿಸಿಕೊಂಡಿರುವುದು ಕಂಡುಬಂದರೆ ಸರ್ಕಾರ ನೌಕರರ ಮೇಲೆ ಕ್ರಮ ಕೈಗೊಳ್ಳುವ ಅವಕಾಶವಿದೆ. ಹಾಗಾಗಿ ಸರ್ಕಾರಿ ನೌಕಕರು ಸಮಾಜದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂಬುದನ್ನು ಸರ್ಕಾರಿ ನಿಯಮದಲ್ಲಿ ಸ್ಪಷ್ಟವಾಗಿದೆ. ಇದನ್ನೂ ಓದಿ: ವೇಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ
Advertisement
Advertisement
ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕಕರು ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಪರ ಅಥವಾ ವಿರೋಧವಾಗಿ ಲೇಖನ, ಅಭಿಪ್ರಾಯ, ವೀಡಿಯೋಗಳನ್ನು ಹಂಚಿಕೊಳ್ಳುವುದನ್ನು ಸರ್ಕಾರ ಗಮನಿಸಿದೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕಕರು ಪ್ರದರ್ಶಿಸುವ ವರ್ತನೆಯು ಕೂಡ ರಾಜ್ಯ ನಾಗರಿಕ ಸೇವಾ(ನಡತೆ) ನಿಮಯಗಳು, 2021ರ ವ್ಯಾಪ್ತಿಗೆ ಒಳಪಡಿಸಿದೆ. ಈ ನಿಯಮಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವ ಸರ್ಕಾರಿ ನೌಕರರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮ 1957ರ ಅವಕಾಶಗಳನ್ವಯ ಶಿಸ್ತುಕ್ರಮ ಕೈಗೊಳ್ಳುವಂತೆ ಆಯಾ ಪ್ರಾಧಿಕಾರಗಳಿಗೆ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್
Advertisement
ಇನ್ನುಮುಂದೆ ಸರ್ಕಾರಿ ನೌಕಕರು ಬೇಕಾಬಿಟ್ಟಿ ಸಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದಲ್ಲಿ ನಿಯಮಕ್ಕೆ ವಿರುದ್ಧವಾಗಿದ್ದರೆ ತಮ್ಮ ಸರ್ಕಾರಿ ಉದ್ಯೋಗಕ್ಕೆ ಕುತ್ತು ತರುವ ಸಾಧ್ಯತೆ ಹೆಚ್ಚಿದೆ.