ಬೆಂಗಳೂರು: ಸದ್ಯ ಯುದ್ಧಪೀಡಿತ ಉಕ್ರೇನ್‍ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕೆಂದರೆ ಏನೇ ನಿರ್ಧಾರ ಕೈಗೊಳ್ಳಬೇಕಾದ್ರು, ರಾಜ್ಯಕ್ಕೆ ಕೇಂದ್ರ ಅನುಮತಿ ಬೇಕಾಗುತ್ತದೆ.
Advertisement
ರಾಜ್ಯ ಸರ್ಕಾರದ ಮುಂದಿರುವ ಆಯ್ಕೆಗಳು:
ಉಕ್ರೇನ್ ನಿಂದ ಬಂದಿರೋ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರಕ್ಕೂ ಸದ್ಯ ಯಾವುದೇ ಮಾರ್ಗಗಳು ಇಲ್ಲ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಕೋರ್ಸ್ ಮುಂದುವರಿಸಲು ಅವಕಾಶ ಕೊಡಲು ಅಧಿಕಾರ ಇಲ್ಲ. ರಾಜ್ಯ ಸರ್ಕಾರ ಏನೇ ನಿರ್ಧಾರ ಮಾಡಬೇಕಾದ್ರು ಕೇಂದ್ರ ಸರ್ಕಾರದ ಅನುಮತಿಬೇಕು. ಕೇಂದ್ರ ಸರ್ಕಾರ ನಿಯಮ ತಂದು ಅವಕಾಶ ಮಾಡಿಕೊಟ್ಟರೆ ಮಾತ್ರ ರಾಜ್ಯ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಬಹುದಾಗಿದೆ.
Advertisement
Advertisement
ವಿದ್ಯಾರ್ಥಿಗಳ ಮುಂದಿರೋ ಆಯ್ಕೆಗಳು:
ವಿದ್ಯಾರ್ಥಿಗಳು ರಾಜ್ಯದಲ್ಲಿ ಕೋರ್ಸ್ ಮುಂದುವರೆಸುತ್ತೇವೆ ಅಂತ ಸಿಎಂ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಮನವಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ರಾಜ್ಯ ಸರ್ಕಾರ ತರಬೇಕಾಗುತ್ತೆ. ಇದನ್ನೂ ಓದಿ: ಆಲೂಗಡ್ಡೆ, ಟೊಮೆಟೊ ಬೆಲೆ ಪರಿಶೀಲಿಸಲು ನಾನು ರಾಜಕೀಯ ಸೇರಿಲ್ಲ – ಪಾಕ್ ಪ್ರಧಾನಿ
Advertisement
ದೇಶದಲ್ಲಿ ಕೋರ್ಸ್ ಮುಂದುವರಿಸಲು ಕೇಂದ್ರ ಸರ್ಕಾರ ವಿಶೇಷ ಕಾನೂನು ರಚಿಸಿ ರಾಜ್ಯಗಳಿಗೆ ಕೋರ್ಸ್ ಮುಂದುವರಿಸಲು ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಬೇಕು. ಕೇಂದ್ರ ಸರ್ಕಾರ ಅನುಮತಿ ನೀಡಿದ ಬಳಿಕ ವಿದ್ಯಾರ್ಥಿಗಳಿಗೆ ಕೋರ್ಸ್ ಮುಂದುವರಿಸಲು ರಾಜ್ಯ ಸರ್ಕಾರ ಕಾಲೇಜುಗಳನ್ನ ಸಿದ್ಧಪಡಿಸಿ ಕೋರ್ಸ್ ಗೆ ಅವಕಾಶ ಮಾಡಿಕೊಡಬಹುದು.