ಹುಬ್ಬಳ್ಳಿ: ಮಹದಾಯಿ ನೀರಿನ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸತ್ತಿರುವ ರೈತರು ಮತ್ತೊಂದು ಸುತ್ತಿನ ಹೋರಾಟಕ್ಕೆ ರಣಕಹಳೆ ಮೊಳಗಿಸಿದ್ದಾರೆ.
ರೈತ ಹುತ್ಮಾತ್ಮ ದಿನವಾದ ಜುಲೈ 21 ರಿಂದ ಸಾಲ ಮರುಪಾವತಿ ಬಾಯ್ಕಟ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಅಭಿಯಾನಕ್ಕೆ ಮಹದಾಯಿ ಹೋರಾಟ ಸಂಸ್ಥಾಪಕ ವಿಜಯ ಕುಲಕರ್ಣಿ ಕರೆ ನೀಡಿದ್ದು, ವಿವಿಧ ಸಂಘಟನೆಗಳು ಮತ್ತು ರೈತರಿಂದ ಬೆಂಬಲ ವ್ಯಕ್ತವಾಗಿದೆ. ಮಹಾದಾಯಿ ಯೋಜನೆ ಜಾರಿಯಾಗದಿದ್ದರೆ ಬ್ಯಾಂಕ್‍ನಲ್ಲಿ ಮಾಡಿರುವ ಬೆಳೆ ಸಾಲ, ನೀರಾವರಿ ಸಾಲ ಸೇರಿದಂತೆ ವಿವಿಧ ಮಾದರಿಯ ಸಾಲಗಳನ್ನು ತುಂಬದಿರಲು ನಿರ್ಧಾರ ಮಾಡಿದ್ದಾರೆ.
Advertisement
Advertisement
ಈ ಬಗ್ಗೆ ರೈತ ಮುಖಂಡರು ಮಾತನಾಡಿ, ಬಜೆಟ್‍ನಲ್ಲಿ ಹಣವಿಟ್ಟು ನಾಟಕ ಆಡ್ತಿರಿ, ಆದರೆ ಡಿಪಿಆರ್ ಮಾಡಿಸಲು ಆಗುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಮಹದಾಯಿಯನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾದಾಯಿ ವಿಷಯವಾಗಿ ನಮ್ಮ ಜೊತೆ ಹೋರಾಟ ಮಾಡಿದ್ದರು. ಪಾದಾಯತ್ರೆ ಮಾಡಿದ್ದರು. ಜೊತೆಗೆ ರಕ್ತದಲ್ಲಿ ನಮ್ಮ ಜೊತೆ ಪತ್ರ ಬರೆದಿದ್ದಿರಿ. ಇವಾಗ ನೀವೇ ಅಧಿಕಾರದಲ್ಲಿದ್ದಿರಿ. ಯಾಕೆ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಚಾಮುಂಡೇಶ್ವರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ- ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ
Advertisement
Advertisement
ಯೋಜನೆ ಜಾರಿ ಮಾಡಲಿಲ್ಲ ಅಂದರೆ ನಿಮಗೆ ಧಿಕ್ಕಾರ ಕೂಗಬೇಕಾಗುತ್ತದೆ. ಅದಕ್ಕಾಗಿ ನಮ್ಮ ರೈತರಿಗೆ ಕರೆ ಕಟ್ಟಿದ್ದೇವೆ. ನಮಗೆ ನೀರೆ ನೀಡಲ್ಲ ಅಂದರೆ ಸಾಲ ತುಂಬೊದು ಹೇಗೆ. ಅದಕ್ಕಾಗಿಯೇ ನಾವು ಸಾಲ ತುಂಬುವುದಿಲ್ಲ. ಸರ್ಕಾರದ ಏನಾದ್ರು ಮಾಡಿಕೊಳ್ಳಲಿ, ನಾವು ಸಾಲ ತುಂಬಲ್ಲ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ