ಬೆಂಗಳೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಘಟನೆ ನಂತರ ಎಚ್ಚೆತ್ತ ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ರಾಜ್ಯದ ದೇವಸ್ಥಾನಗಳಲ್ಲಿ ಪ್ಯಾಕ್ ಮಾಡಿ ವಿತರಿಸುವ ಪ್ರಸಾದದ ಮೇಲೆ ತಯಾರಿಸಿದ ದಿನ ಹಾಗೂ ಎಷ್ಟು ದಿನಗಳವರೆಗೆ ಮಾತ್ರ ಸೇವಿಸಬಹುದು ಎಂಬ ಮಾಹಿತಿ ನಮೂದಿಸುವುದು ಕಡ್ಡಾಯವಾಗಲಿದೆ. ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನಿಯಮ ಪ್ರಕಾರ ‘ಎಕ್ಸ್ ಪೈರಿ ಡೇಟ್’ ನಮೂದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?
Advertisement
Advertisement
ಮುಜರಾಯಿ ಇಲಾಖೆ ದೇವಾಲಯಗಳು ಸೇರಿದಂತೆ ಎಲ್ಲಾ ಖಾಸಗಿ ದೇವಾಲಯಗಳು ಹಾಗೂ ಮಠಗಳಿಗೂ ಈ ನಿಯಮ ಅನ್ವಯವಾಗಲಿದೆ. ಪ್ರಸಾದದ ಮೇಲೆ ಏನೆಲ್ಲಾ ನಮೂದಾಗಬೇಕು ಅನ್ನೋದನ್ನು ನೋಡೋದಾದರೆ,
Advertisement
* ಪ್ರಸಾದದ ಪ್ಯಾಕೆಟ್‍ನಲ್ಲಿ ದೇವಾಲಯ ಹೆಸರು
* ತಯಾರಾದ ದಿನಾಂಕ
* ಬ್ಯಾಚ್ ನಂಬರ್
* ತೂಕ
* ಬಳಕೆಯ ಅವಧಿ(ಎಕ್ಸ್ ಪೈರಿ ಡೇಟ್, ಯೂಸ್ ಬಿಫೋರ್, ಬೆಸ್ಟ್ ಬಿಫೋರ್)
* ಪ್ರಸಾದಕ್ಕೆ ಬಳಸಿರುವ ಪದಾರ್ಥ
Advertisement
ಇದು ಕೇವಲ ದೇವಾಲಯ ಪ್ರಸಾದಕ್ಕೆ ಮಾತ್ರವಲ್ಲದೇ ತೀರ್ಥದ ಬಾಟಲ್‍ಗೂ ಈ ನಿಯಮ ಅನ್ವಯವಾಗಲಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ತಿಂದು 17 ಮಂದಿ ಮೃತಪಟ್ಟಿದ್ದಾರೆ. ಇನ್ನೂ 60ಕ್ಕೂ ಮಂದಿಗೂ ಹೆಚ್ಚಿನ ಭಕ್ತರು ಅಸ್ವಸ್ಥರಾಗಿದ್ದು, ಮೈಸೂರು ಮತ್ತು ಚಾಮರಾಜನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ರೀತಿಯ ನಿಯಮವನ್ನು ಜಾರಿಗೆ ತಂದಿದೆ.
ಈ ಹಿಂದೆಯೇ ಮುಜರಾಯಿ ಇಲಾಖೆ, ದೇವರ ನೈವೇದ್ಯ ಮತ್ತು ದಾಸೋಹ ತಯಾರಿಸುವ ಕೋಣೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಬೇಕು. ಪ್ರಮುಖವಾಗಿ ದೇವಾಲಯದ ಅಡುಗೆ ಕೋಣೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ಮೇಲೆ ಕಟ್ಟುನಿಟ್ಟಿನ ನಿಗಾವಹಿಸುವುದು. ತಯಾರಿಸಿದ ನೈವೇದ್ಯ/ ಅಡುಗೆಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಬೇಕು ಮತ್ತು ದೇವಾಲಯಗಳಲ್ಲಿ ತಯಾರಿಸುವ ಪ್ರಸಾದವನ್ನು ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಬೇಕು. ಈ ರೀತಿಯ ಅನೇಕ ನಿಯಮಗಳನ್ನು ಕಡ್ಡಾಯ ಮಾಡಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv