ಭೋಪಾಲ್: ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದು ಸರ್ಕಾರಿ ನೌಕರ (Government Official) ಮೃತಪಟ್ಟ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ.
ಮೃತರನ್ನು ಸುರೇಂದ್ರ ಕುಮಾರ್ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇವರು ಅಂಚೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಇವರು ಹೃದಯ ಸ್ತಂಭನವಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
Advertisement
ಸುರೇಂದ್ರ ಅವರು ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದ ದೃಶ್ಯವನ್ನು ನರೆದಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್ʼ ಪ್ರದರ್ಶನ – ತಬ್ಬಿಬ್ಬಾದ ಜನ!
Advertisement
ಸುರೇಂದ್ರ ಅವರು ಕುಸಿದು ಬೀಳುತ್ತಿದ್ದಂತೆಯೇ ಅಲ್ಲೆ ಇದ್ದವರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಯಾವುದೇ ಫಲಪ್ರದವಾಗಿಲ್ಲ. ಹಿಂದಿ ಹಾಡಿಗೆ ತನ್ನ ಸಹೋದ್ಯೋಗಿಗಳೊಂದಿಗೆ ನೃತ್ಯ ಮಾಡುತ್ತಿದ್ದಾಗ ಅವರು ಕುಸಿದು ಬೀಳುತ್ತಿರುವುದು ವೀಡಿಯೋದಲ್ಲಿ ಕಂಡುಬರುತ್ತಿದೆ.
Advertisement
ಅಂಚೆ ಇಲಾಖೆಯ 34ನೇ ಅಖಿಲ ಭಾರತ ಅಂಚೆ ಹಾಕಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಮಾ. 17ರಂದು ಫೈನಲ್ ಪಂದ್ಯ ನಿಗದಿಯಾಗಿತ್ತು. ಮಾರ್ಚ್ 16ರಂದು ಸಂಜೆ ಇಲಾಖೆಯ ಕಚೇರಿ ಆವರಣದಲ್ಲಿಯೇ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.