ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

Public TV
1 Min Read
GOVT WORKERS

ಬೆಂಗಳೂರು: ಸರ್ಕಾರಿ ನೌಕರ (Government Employees) ರಿಗೆ 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

BASAVARAJ BOMMAI

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸುದ್ದಿಗಾರರೊಂದಿಗೆ ಮಾತನಾಡಿ, 17% ವತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

GOVT

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ, 1018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ

HOSPITAL 2

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿರುವುದಾಗಿ ತಿಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *