ಇನ್ನು ಮುಂದೆ ಅರಣ್ಯದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ

Public TV
1 Min Read
Government permission is now mandatory for any film Shoot in the forest

ಬೆಂಗಳೂರು: ಅರಣ್ಯ (Forest) ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ (Shooting) ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವರು ಸೂಚನೆ ನೀಡಿದ್ದಾರೆ.  ಇದನ್ನೂ ಓದಿ: ಕಾಂತಾರ 2ಗೆ ಬಿಗ್ ರಿಲೀಫ್ – ಅಧಿಕಾರಿಗಳಿಂದ ಕ್ಲೀನ್ ಚಿಟ್

 

Government permission is now mandatory for any film Shoot in the forest 1

ಸೂಚನೆಯಲ್ಲಿ ಏನಿದೆ?
ಚಲನಚಿತ್ರ, ದೂರದರ್ಶನ ಸಾಕ್ಷ್ಯಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ

ಇದಲ್ಲದೆ ಸ್ಥಳೀಯ ಮಟ್ಟದಲ್ಲೂ ಅಧಿಕಾರಿಗಳು ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ

ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು.

 

Share This Article