ಬೆಂಗಳೂರು: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣಿಟ್ಟಿರುವ ಸರ್ಕಾರ (Government of Karnataka) ಹೊಸ ಸುಧಾರಣೆ ತರಲು ಯೋಜಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಹೌದು. ಅದಕ್ಕಾಗಿ ಸಿಎಂ, ಸಚಿವರ ಕಚೇರಿಯಲ್ಲಿ ಬೇಕಾಬಿಟ್ಟಿ ಸಿಬ್ಬಂದಿ ಇದ್ದರೆ ಅವರನ್ನ ಮನೆಗೆ ಕಳುಹಿಸಲು ನಿರ್ಧಾರ ಕೈಗೊಳ್ಳುವ ಪ್ಲ್ಯಾನ್ ಮಾಡಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಅನಗತ್ಯವಾಗಿರುವ ಸಿಬ್ಬಂದಿಯ ಬಗ್ಗೆ ವರದಿ ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ – ಚಿಕ್ಕಬಳ್ಳಾಪುರದಲ್ಲಿ ಗಣೇಶ ವಿಸರ್ಜನೆಗೆ 600 ಪೊಲೀಸರ ಭದ್ರತೆ
ಸರ್ಕಾರದಲ್ಲಿ ಬಿಗಿ ಆಡಳಿತಕ್ಕೆ ಬಿಗ್ ಪ್ಲ್ಯಾನ್.. ಕಡತಗಳ ಸೋರಿಕೆಗೂ ಬ್ರೇಕ್ ಹಾಕುವ ತಂತ್ರಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಮೊದಲು ಆಡಳಿತ ಬಿಗಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ
ಮುಡಾ ಪ್ರಕರಣದಲ್ಲಿ ಕಾನೂನು ಹೋರಾಟ, ರಾಜಕೀಯ ಹೋರಾಟ, ಅದರ ಪಾಡಿಗೆ ಅದು ನಡೆಯುತ್ತೆ. ಆದರೆ ಆಡಳಿತಯಂತ್ರ ಬಿಗಿಗೊಳಿಸಿ ಅನಗತ್ಯವಾಗಿರೋರಿಗೆ ಗೇಟ್ ಪಾಸ್ ಕೊಡಬೇಕೆಂಬ ಕಟ್ಟುನಿಟ್ಟಿನ ತೀರ್ಮಾನ ಸರ್ಕಾರ ಕೈಗೊಂಡಿದೆ. ಆದ್ದರಿಂದ ಸಿಎಂ, ಸಚಿವರ ಕಚೇರಿಯಲ್ಲಿ ಅನಗತ್ಯವಾಗಿರುವ ಅಧಿಕಾರಿ, ಸಿಬ್ಬಂದಿ ವರ್ಗದವರ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಟಾಸ್ಕ್ ನೀಡಲಾಗಿದೆ ಎಂದು ಹೇಳಲಾಗಿದೆ.
ಅಲ್ಲದೇ ಸರ್ಕಾರದ ಮಾಹಿತಿ ಸೋರಿಕೆ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಪ್ರತ್ಯೇಕ ವರದಿ ಕೊಡುವಂತೆ ಸರ್ಕಾರ ಕೇಳಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್‌ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್‌ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ