ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರ ಆಕ್ರೋಶ ತಣ್ಣಗಾಗಿಸಲು ಸರ್ಕಾರ ಮುಂದಾಗಿದೆ.
ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಸಣ್ಣ ಪುಟ್ಟ ಗಲಾಟೆ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ಪ್ಲ್ಯಾನ್ ಮಾಡಿದೆ. ಇದನ್ನೂ ಓದಿ: ಆಗಸ್ಟ್ 15ರ ನಂತ್ರ ಸರ್ಕಾರ, ಪಕ್ಷದಲ್ಲಿ ಬದಲಾವಣೆ – ಸಂಪುಟ ಸಭೆಯಲ್ಲಿ ಬೊಮ್ಮಾಯಿ ಸುಳಿವು
Advertisement
Advertisement
ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, 2019ರಿಂದ ದಾಖಲಾಗಿರುವ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರಕ್ಕೆ ಸಂಪುಟ ಉಪಸಮಿತಿಯಿಂದ ಶಿಫಾರಸು ಮಾಡ್ತೇವೆ. ಆದರೆ ವೈಯಕ್ತಿಕ ವಿಚಾರಕ್ಕಾಗಿ ಮಾಡಿದ ಕೊಲೆ, ಹೆಚ್ಚು ಸಾರ್ವಜನಿಕ ಆಸ್ತಿ ಹಾನಿ ಮಾಡಿರುವ ಪ್ರಕರಣಗಳನ್ನು ಇದಕ್ಕೆ ಪರಿಗಣಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಇದೇ ವೇಳೆ ಆರ್‌ಎಸ್‌ಎಸ್ ಅಂಗಸಂಸ್ಥೆ ಜನಸೇವಾ ಟ್ರಸ್ಟ್‌ಗೆ ಆನೇಕಲ್ ಬಳಿಕ ಕುರುಬರಹಳ್ಳಿಯಲ್ಲಿ 35.33 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಮಂಜೂರು ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇದನ್ನೂ ಓದಿ: ಮೋದಿ ಚೀನಾದೊಂದಿಗೆ `ರಾಷ್ಟ್ರಧ್ವಜ ಒಪ್ಪಂದ’ ಮಾಡ್ಕೊಂಡಿದ್ದಾರೆ – ರಾಹುಲ್ ಗಾಂಧಿ ಆರೋಪ
ಇನ್ನು, ಕಮ್ಮಸಂದ್ರದಲ್ಲಿ ಉತ್ತರ ಕರ್ನಾಟಕ ಸಂಘಸಂಸ್ಥೆಗಳ ಮಹಾ ಸಂಸ್ಥೆಗೆ 3.24 ಎಕರೆ ಜಮೀನು ಮಂಜೂರು ಮಾಡಲು ಕೂಡ ಸಂಪುಟ ಒಪ್ಪಿಗೆ ಸೂಚಿಸಿದೆ.