ನವದೆಹಲಿ: ಪ್ರತಿಯೊಂದು ಭೂ ದಾಖಲೆಗೂ ಆಧಾರ್ ಸಂಖ್ಯೆಯನ್ನು ಜೋಡಿಸುವಂತೆ ಕೇಂದ್ರ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ, ಇದೊಂದು ಸುಳ್ಳು ಸುದ್ದಿ ಪ್ರೆಸ್ ಇನ್‍ಫಾರ್ಮೆಶನ್ ಬ್ಯುರೋ ಸ್ಪಷ್ಟಪಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪಿಐಬಿಯ ವಕ್ತಾರ ಫ್ರಾಂಕ್ ನೂರನ್ಹಾ ಇದೊಂದು ಸುಳ್ಳು ಸುದ್ದಿಯಾಗಿದ್ದು, ಈ ವಿಚಾರವಾಗಿ ಪೊಲೀಸ್ ದೂರು ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement
ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿದಂತೆ ಈಗ ಎಲ್ಲ ಭೂ ದಾಖಲೆಗಳನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಬೇಕು. ಈ ವರ್ಷದ ಆಗಸ್ಟ್ 14ರ ಒಳಗಡೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಬೇನಾಮಿ ಆಸ್ತಿಗಳನ್ನು ಪತ್ತೆ ಹಚ್ಚಿ, ಪಾರದರ್ಶಕತೆ ತರಲು ಭೂ ಒಡೆಯನ ಆಧಾರ್ ಸಂಖ್ಯೆಯನ್ನು ಸೇರಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.
Advertisement
ಜೂನ್ 15ರಂದು ಹೊರಡಿಸಿರುವ ಆದೇಶದಲ್ಲಿ ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ಅವರ ಸಹಿಯೂ ಇತ್ತು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‍ಗಳನ್ನು ಹೆಸರಿಸಿ ಈ ಪತ್ರ ಬರೆಯಲಾಗಿದೆ ಸಲಹೆಗಳನ್ನು ಕೇಳಲಾಗಿತ್ತು.
Advertisement
The letter attributed to Cabinet Secretariat on #Aadhaar linking to Land records,is completely fake & mischievous pic.twitter.com/qbk6TsyiII
— Rajesh Malhotra (@DG_PIB) June 19, 2017
Advertisement
Clarification regarding Fake Letter on #Aadhaar attributed to Cabinet Secretariat: https://t.co/4ZgqlR5Yoe pic.twitter.com/X0WOu35ZA2
— PIB India (@PIB_India) June 19, 2017