ಛತ್ತೀಸಗಡ: ವಿವಿಧ ಕ್ರೀಡೆಗಳಲ್ಲಿ ಮಿಂಚಲು ಸಹಾಯ ಮಾಡಿದ್ದಕ್ಕಾಗಿ ವಿದ್ಯಾರ್ಥಿನಿಯರಿಂದ ಲೈಂಗಿಕ ಸುಖಕ್ಕಾಗಿ ಬೇಡಿಕೆಯಿಟ್ಟ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕ ಬಂಧನವಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದ್ದು, ಆರೋಪಿ ಸಹಾಯಕ ಶಿಕ್ಷಕನನ್ನು 47 ವರ್ಷದ ದೀಪಕ್ ಕುಮಾರ್ ಸೋನಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶಿಕ್ಷಕ ಅಂತರ ಶಾಲಾ ಆಟಗಳಲ್ಲಿ ಖೋ-ಖೋ ಮತ್ತು ಕಬಡ್ಡಿ ಪಂದ್ಯಾವಳಿಗಳಲ್ಲಿ ಹಲವಾರು ಪದಕಗಳನ್ನು ಗೆಲ್ಲುವಲ್ಲಿ ತನ್ನ ಶಾಲೆಯ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಗುಂಪು ಘರ್ಷಣೆಗೆ ಇಬ್ಬರು ಬಲಿ – 58 ಜನರ ವಿರುದ್ಧ ದೂರು ದಾಖಲು
ವರದಿ ಪ್ರಕಾರ, ಶಿಕ್ಷಕ ಬಲೋಡ್ ಜಿಲ್ಲೆಯ ಜುಂಗೇರಾ ಪ್ರಾಥಮಿಕ ಶಾಲೆಯಲ್ಲಿ ಗಣಿತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಮಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಖೋ-ಖೋ ಮತ್ತು ಕಬಡ್ಡಿ ತರಬೇತಿಯನ್ನೂ ನೀಡಿದ್ದಾನೆ. ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯರಿಗೆ ದೀಪಕ್ ಕುಮಾರ್ ಸೋನಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ತಮ್ಮ ಶಿಕ್ಷಕರು ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿ ಐವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರು ದೂರು ದಾಖಲಿಸಿದ್ದಾರೆ.
ಮುಂಬರುವ ಖೋ-ಖೋ ಸ್ಪರ್ಧೆಯ ಬಗ್ಗೆ ಕೇಳಲು 8 ನೇ ತರಗತಿಯ ವಿದ್ಯಾರ್ಥಿನಿ ಫೋನ್‌ನಲ್ಲಿ ಕರೆ ಮಾಡಿದಾಗ ಶಿಕ್ಷಕನ ಅಸಲಿಯತ್ತು ಬಯಲಾಗಿದೆ. ಫೋನಲ್ಲಿ ಮಾತಾಡುವ ವೇಳೆ ಹುಡುಗಿಯ ತಾಯಿ ತನ್ನ ಮಗಳ ಬಳಿ ನಿಂತಿದ್ದು ಫೋನನ್ನು ಸ್ಫೀಕರ್‌ನಲ್ಲಿ ಹಾಕುವಂತೆ ಹೇಳಿದ್ದರು. ಶಿಕ್ಷಕನ ಅಸಭ್ಯ ಮಾತು ಕೇಳಿ ಬಾಲಕಿಯ ತಾಯಿ ಬೆಚ್ಚಿಬಿದ್ದಿದ್ದರು. ಈ ಬಳಿಕ ಶಿಕ್ಷನ ಅಸಲಿ ಮುಖ ಬಹಿರಂಗಗೊಂಡಿದೆ. ನಂತರ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ
ಹುಡುಗಿಯರು ಶಿಕ್ಷಕನ ವರ್ತನೆಯನ್ನು ವಿರೋಧಿಸಿದಾಗ, ಶಿಕ್ಷಕ ಆಟಗಳಲ್ಲಿ ಪದಕಗಳನ್ನು ಗೆಲ್ಲಲು ಸಹಾಯ ಮಾಡುವುದರಿಂದ ಆತನ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾನೆ ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ನವೀನ್ ಬೋರ್ಕರ್ ತಿಳಿಸಿದ್ದಾರೆ.