ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು ಮಕ್ಕಳು ತಮ್ಮ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಪಾಠ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿರುವ ಈ ಸರ್ಕಾರಿ ಶಾಲೆಯಲ್ಲಿ ಇನ್ನೂರಕ್ಕೂ ಅಧಿಕ ಮಕ್ಕಳು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಪಾಠ ಕೇಳುತ್ತಿದ್ದಾರೆ. ಶಾಲೆಯ ಎಲ್ಲಾ ಕೋಣೆಗಳ ಮೇಲ್ಚಾವಣಿ ಶಿಥಿಲಗೊಂಡಿದ್ದು, ಅಲ್ಲದೇ ಗೋಡೆಗಳು ಸಹ ಬಿರುಕು ಬಿಟ್ಟು ಕುಸಿದು ಬೀಳುವ ಅಪಾಯ ಎದುರಾಗಿದೆ. ಮಳೆ ಬಂದರೆ ಸಾಕು ಬಿರುಕುಬಿಟ್ಟ ಮೇಲ್ಚಾವಣಿ ಮೂಲಕ ಮಳೆ ನೀರೆಲ್ಲಾ ತರಗತಿ ಕೋಣೆಗಳ ತುಂಬೆಲ್ಲಾ ಆಗುತ್ತವೆ.
Advertisement
Advertisement
ಮೈಸೂರು ಸರ್ಕಾರವಿದ್ದಾಗ ಈ ಸರ್ಕಾರಿ ಶಾಲೆ ಆರಂಭವಾಗಿದ್ದು 5 ದಶಕಗಳಷ್ಟು ಹಳೆಯದಾದ ಈ ಶಾಲೆ ಇದುವರೆಗೆ ದುರಸ್ತಿ ಕಂಡಿಲ್ಲ. ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಹಣ ಬಂದರೂ ಸಹ, ಶಿಕ್ಷಣ ಇಲಾಖೆ ಮಾತ್ರ ಈ ಶಾಲೆಯತ್ತ ಗಮನ ಹರಿಸದೇ ಇರೋದು ಆಕ್ರೋಶಕ್ಕೆ ಕಾರಣವಾಗಿದೆ.
Advertisement
ಶಾಲಾ ಕಟ್ಟಡವನ್ನು ದುರಸ್ತಿ ಮಾಡಿಸಿ ಎಂದು ಬಿಇಓ, ಡಿಡಿಪಿಐ ಹಾಗೂ ಜಿಲ್ಲಾ ಪಂಚಾಯತ್‍ಗೆ ಸಾಕಷ್ಟು ಬಾರಿ ಮನವಿ ಮಾಡಿದ್ದು, ಅಧಿಕಾರಿಗಳು ಕ್ಯಾರೇ ಅನ್ನುತ್ತಿಲ್ಲ. ಮಳೆಗಾಲ ಬೇರೆ ಆರಂಭವಾಗಿದ್ದರಿಂದ ಶಾಲೆಯ ಎಲ್ಲಾ ಕೋಣೆಗಳು ಸೋರುತ್ತಿದ್ದು, ಮೇಲ್ಚಾವಣಿ ಕುಸಿಯುವ ಅಪಾಯ ಎದುರಾಗಿದೆ. ಶಿಕ್ಷಣಕ್ಕೆ ಅನೂಕುಲವಾದಂತಹ ಯಾವೊಂದು ವಾತಾವರಣ ಈ ಶಾಲೆಯಲ್ಲಿಲ್ಲ. ಒಂದರಿಂದ ಏಳನೇ ತರಗತಿವರೆಗೆ ಇರುವ ಈ ಶಾಲೆ ಅರ್ಧ ಶತಮಾನದಷ್ಟು ಹಳೆಯದಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇನ್ನಾದರು ಸಂಬಂಧಪಟ್ಟ ಶಿಕ್ಷಣ ಇಲಾಖೆ ದುರಸ್ತಿ ಭಾಗ್ಯ ಕರುಣಿಸುತ್ತದೆಯೇ ಎಂಬುದನ್ನು ನೋಡಬೇಕಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv