ಹಾವೇರಿ: ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನ ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ (Haveri) ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.
ಹಾವೇರಿ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಬ್ಬು ಬೆಳೆಗಾರರು ಸರ್ಕಾರದ ಹಾಗೂ ಕಾರ್ಖಾನೆಯ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲೆ ಮಾಜಿ ಯೋಧರು, ವಕೀಲರು ಸಂಘವು ಪ್ರತಿಭಟನೆಗೆ ಬೆಂಬಲ ನೀಡಿದೆ. ಇದನ್ನೂ ಓದಿ: ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಯೋಗಿ ಆದಿತ್ಯನಾಥ್
ಸರ್ಕಾರ 3,200 ಘೋಷಣೆ ಮಾಡಿದೆ. ಮೂರು ಕಾರ್ಖಾನೆಗಳು 2,700 ಮತ್ತು 2,800 ರೂ. ಕೊಡಲು ಮುಂದೆ ಬರುತ್ತಿದ್ದಾರೆ. ಸರ್ಕಾರ ಘೋಷಣೆ ಮಾಡಿದ ಕಬ್ಬಿನ ದರ ಕೊಡಬೇಕು. ಇಲ್ಲದಿದ್ದರೆ ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಪತ್ನಿಯಿಂದ ಕಿರುಕುಳ ಆರೋಪ – ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!

