– ಹನುಮಾನ್ ಚಾಲಿಸಾ ಹಾಕಿದ್ದ ಮುಖೇಶ್ ಮೇಲೆ ಕೇಸ್ ವಿಚಾರಕ್ಕೆ ಶ್ರೀ ಪ್ರತಿಕ್ರಿಯೆ
– ರಾಮನವಮಿಗೆ ಅಯೋಧ್ಯೆಗೆ ಬರಬೇಡಿ ಎಂದು ಮನವಿ
ವಿಜಯಪುರ: ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಶ್ರೀಗಳು (Sri Vishwaprasanna Tirtha Swamiji) ಅಸಮಾಧಾನ ಹೊರಹಾಕಿದ್ದಾರೆ.
Advertisement
ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ನಗರ್ತ್‍ಪೇಟೆಯಲ್ಲಿ (Nagartha Pete Attack Case) ಹನುಮಾನ್ ಚಾಲಿಸಾ (Hanuman Chalisa) ಹಾಕಿ ಹಲ್ಲೆಗೊಳಗಾದ ಮುಖೇಶ್ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ದುಷ್ಕೃತ್ಯಗಳಿಗೆ ಕೈ ಹಾಕಬಾರದು. ಎಲ್ಲಾ ಸಮಾಜಗಳನ್ನು ಒಟ್ಟಾಗಿ ಕೊಂಡೊಯ್ಯುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ಮಾಡಿರುವ ಅನ್ಯಾಯ ಹೇಳಿದರೆ ಸಿದ್ದರಾಮಯ್ಯಗೆ ದುರಹಂಕಾರ ಅಂತಾರೆ: ಬಿಜೆಪಿ ವಿರುದ್ಧ ಸಿಎಂ ಗುಡುಗು
Advertisement
Advertisement
ರಾಮನವಮಿಗೆ ಅಯೋಧ್ಯೆ ರಾಮಮಂದಿರಕ್ಕೆ ಬರಬೇಡಿ
ರಾಮನವಮಿ ದಿನದಂದು ಅಯೋಧ್ಯೆಗೆ ಭಕ್ತರು ಬರಬೇಡಿ. ತಮ್ಮ ತಮ್ಮ ಊರುಗಳಲ್ಲಿ ರಾಮನವಮಿ ಆಚರಿಸಿ. ಆ ದಿನ ಅಯೋಧ್ಯೆಗೆ ಭಕ್ತರು ಬಂದಲ್ಲಿ ದರ್ಶನಕ್ಕೆ ತೊಂದರೆಯಾಗಲಿದೆ. ತಮ್ಮ ಊರಿನ ಮಂದಿರ, ಮನೆಗಳಲ್ಲೇ ರಾಮನವಮಿ ಆಚರಿಸಿ ಎಂದು ಶ್ರೀಗಳು ಸಲಹೆ ಕೊಟ್ಟಿದ್ದಾರೆ.
Advertisement
ಈಗಲೇ ಪ್ರತಿ ಗಂಟಗೆ ರಾಮಮಂದಿರದಲ್ಲಿ 15 ಸಾವಿರ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ನಿತ್ಯ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ರಾಮನವಮಿಗೆ ಇನ್ನಷ್ಟು ಭಕ್ತರು ಆಗಮಿಸಿದಲ್ಲಿ ತೊಂದರೆ ಉಂಟಾಗಲಿದೆ ಎಂದು ಅವರು ಈ ಮುನ್ನೆಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಭರ್ಜರಿ ಬೇಟೆ – 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ