– ಕಿಮ್ಸ್‌ಗೆ ಸಚಿವ ಸಂತೋಷ್ ಲಾಡ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟದಿಂದ (Cylinder Blast) ಗಂಭೀರ ಗಾಯಗೊಂಡಿದ್ದ 9 ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿ ಮೃತರ ಕುಟುಂಬಸ್ಥರನ್ನು ಸಂತೈಸಿದರು. ಈ ವೇಳೆ ಸಚಿವರ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಾಡ್, ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ್ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರನ್ನ ಬದುಕಿಸಲು ಪ್ರಯತ್ನ ಮಾಡಿದೆವು. 4 ನುರಿತ ವೈದ್ಯರನ್ನು ಕರೆಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದರೆ ಇದನ್ನು ಮೀರಿ ಸುಟ್ಟ ಪ್ರಮಾಣ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ. ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎದುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: INDIA ಒಕ್ಕೂಟದಿಂದ ಕಾಂಗ್ರೆಸ್ ಉಚ್ಚಾಟಿಸಿ – ಆಪ್ ಬಂಡಾಯ!
ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನೂ ಹೆಚ್ಚಿನ ಚಿಕಿತ್ಸೆ ನೀಡುತ್ತೇವೆ ಎಂದರು. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ
ಸದ್ಯ ಕಿಮ್ಸ್ ಶವಾಗಾರದಿಂದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಅಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ರವಾನಿಸಲಾಗಿದೆ. ಸಂಜಯ್ ಸವದತ್ತಿ ಅಂತ್ಯಕ್ರಿಯೆ ವಿದ್ಯಾನಗರದ ರುದ್ರಭೂಮಿಯಲ್ಲಿ ನಡೆಯಲಿದ್ದು, ನಿಜಲಿಂಗಪ್ಪ ಅವರ ಅಂತ್ಯಸಂಸ್ಕಾರ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಬಸ್ಸಿನಲ್ಲಿ ಸಿಕ್ಕಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಾಪಸ್, ವ್ಯಕ್ತಿಗೆ ಸನ್ಮಾನ