ಬೆಂಗಳೂರು: ಪೌರ ಕಾರ್ಮಿಕರ ನೇರ ಪಾವತಿ ವ್ಯವಸ್ಥೆ ಅಡಿ ನೇಮಕಾತಿ, ಪೌರ ಕಾರ್ಮಿಕರ (Poura Karmikas) ಖಾಯಂಗೊಳಿಸುವಿಕೆ, ಕಸ ಗುಡಿಸುವವರು, ಲೋಡ್ ಮಾಡುವವರು, ಕಸದ ವಾಹನಗಳ ಡ್ರೈವರ್‌ಗಳನ್ನು ಪೌರ ಕಾರ್ಮಿಕರನ್ನಾಗಿ ಪರಿಗಣಿಸುವುದು ಸೇರಿದಂತೆ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಪೂರಕವಾದ ಕ್ರಮಗಳನ್ನು, ಆದ್ಯತೆಯ ಮೇಲೆ ಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದರು.
ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಮಹಾಸಂಘದ ಪದಾಧಿಕಾರಿಗಳ ಸಭೆ ನಡೆಸಿದ ಸಚಿವರು, ಪೌರ ಕಾರ್ಮಿಕರ ಬೇಡಿಕೆಗಳ ಸಂಬಂಧ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: 53 ಸಾವಿರ ಕೋಟಿ SCSP/TSP ನಿಧಿ ದುರ್ಬಳಕೆಯಾಗಿದೆ – ತನಿಖೆ ಕೋರಿ ಕೇಂದ್ರಕ್ಕೆ ಛಲವಾದಿ ಪತ್ರ!

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು, ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 29,000 ಜನ ನೇರ ವೇತನ ಪೌರಕಾರ್ಮಿಕರನ್ನು ಖಾಯಂ ಮಾಡಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ. ಅದೇ ರೀತಿ ಇನ್ನೂ ಬಾಕಿ ಉಳಿದಿರುವ ಸುಮಾರು 6,800 ಜನ ಪೌರಕಾರ್ಮಿಕರನ್ನು ಸಹ ಶೀಘ್ರವಾಗಿ ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯಲ್ಲಿ ನಿಮ್ಮ ಜಿಲ್ಲೆ ಕೊನೆಯಲ್ಲಿದೆ ಯಾಕೆ: ಪ್ರಿಯಾಂಕ್‌ಗೆ ನಿರಾಣಿ ಪ್ರಶ್ನೆ
ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಪದ್ಧತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್ ಕಾರ್ಮಿಕರುಗಳನ್ನು ಹೊರಗುತ್ತಿಗೆ ಪದ್ಧತಿಯಿಂದ ಮುಕ್ತಗೊಳಿಸಿ, ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಬೇಕು. ಕೆ.ಎಂ.ಸಿ ಕಾಯ್ದೆಯ ಪ್ರಕಾರ ಇವರೆಲ್ಲರೂ ಪೌರಕಾರ್ಮಿಕರೆಂದು ಇರುತ್ತದೆ ಎಂದರು. ಇದನ್ನೂ ಓದಿ: ಹನಿಮೂನ್‌ಗೆ ತೆರಳಿದ್ದ ಟೆಕ್ಕಿ ಅನುಮಾನಾಸ್ಪದ ಸಾವು – ಹೋಂಸ್ಟೇ ಕೊಠಡಿಯಲ್ಲಿ ಮಹಿಳೆ ಶವ ಪತ್ತೆ
ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಎಲ್ಲಾ ಪೌರಕಾರ್ಮಿಕರು, ವಾಹನ ಚಾಲಕರು ಹಾಗೂ ಲೋಡರ್ಸ್ಗಳಿಗೆ ನಗದುರಹಿತ ಆರೋಗ್ಯ ಸೇವೆ ಒದಗಿಸುವ ಸಂಜೀವಿನಿ ಆರೋಗ್ಯ ಯೋಜನೆ ಜಾರಿಗೊಳಿಸಬೇಕು. ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ನೇರ ಪಾವತಿ ಅಡಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಪೌರಕಾರ್ಮಿಕರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು. ನೇರ ಪಾವತಿ ಅಡಿಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಪೌರಕಾರ್ಮಿಕರಿಗೆ ಸರ್ಕಾರದಿಂದ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಪ್ಯಾನ್ ಕರ್ನಾಟಕ ಫಿಲ್ಮ್ ಕನಸು, ಜೂನ್ 21ಕ್ಕೆ ಮುಹೂರ್ತ- ಗಿಲ್ಲಿ ಸಿನಿಮಾಗೆ KVN ಪ್ರೊಡಕ್ಷನ್ ಸಾಥ್

ಪೌರಕಾರ್ಮಿಕರ ಅವಲಂಬಿತ ವಿದ್ಯಾರ್ಥಿಗಳ ಶಿಕ್ಷಣದ ಅನುಕೂಲಕ್ಕಾಗಿ ಶಾಲಾ ಮತ್ತು ಕಾಲೇಜು ಶುಲ್ಕವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ಭರಿಸುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹೆಚ್.ಕೆ. ಪಾಟೀಲರಿಗೆ ಸಚಿವ ಸ್ಥಾನಕ್ಕೆ ಆಗ್ರಹ – ಗದಗದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ 670 ಜನ ಒಳಚರಂಡಿ ಸಹಾಯಕ ಪೌರಕಾರ್ಮಿಕರ ಪೈಕಿ 477 ಜನರನ್ನು ಈಗಾಗಲೆ ಖಾಯಂಗೊಳಿಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಬಾಕಿ ಉಳಿದಿರುವ 193 ಕಾರ್ಮಿಕರನ್ನು ಸಹ ಶೀಘ್ರವಾಗಿ ಖಾಯಂಗೊಳಿಸುವುದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇನ್ನೂ ಅನೇಕ ಬೇಡಿಕೆಗಳನ್ನು ಅವರು ಸರ್ಕಾರಕ್ಕೆ ಸಲ್ಲಿಸಿದರು. ಇದನ್ನೂ ಓದಿ: ನಮಗೆ ತೊಂದರೆ ಕೊಡಲೆಂದೇ ಹೆಚ್‌ಡಿಕೆ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ: ಹೆಚ್.ಸಿ ಬಾಲಕೃಷ್ಣ
ನಿಮ್ಮ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು. ಇದನ್ನೂ ಓದಿ: NEET Paper Leak| ಟೆಲಿಗ್ರಾಮ್ ಮೇಲೆ ಕ್ರಮ – ವಾಟ್ಸಪ್ ಮೇಲೆ ನಿಷೇಧ ಯಾಕಿಲ್ಲ?
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ.ಕಾವೇರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ರವೀಂದ್ರ, ಪೌರ ಕಾರ್ಮಿಕರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹುಟ್ಟುವ ಪ್ರತಿ ಮಗುವಿನ ಮೇಲೆ 1.28 ಲಕ್ಷ ರೂ ಸಾಲ
