ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿ ಸಂಧ್ಯಾ ಸಚಿನ್‍ರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಪ್ರಭಾವವನ್ನು ಬಳಸಿಕೊಂಡು ವರ್ಗಾವಣೆ ಮಾಡಿರುವ ಆರೋಪ ಕೇಳಿಬಂದಿದೆ.
Advertisement
ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿದಳದ ಪ್ರಭಾರ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್, ಬೆಳ್ತಂಗಡಿ ತಾಲೂಕಿನ ಅಕ್ರಮ ಮರ ಸಾಗಾಟಗಾರರ ಮರಮಟ್ಟು, ವಾಹನ ವಶಪಡಿಸಿಕೊಂಡಿದ್ದರು. ಇದಕ್ಕೆ ಹರೀಶ್ ಪೂಂಜಾ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಬಳಿಕ ಹರೀಶ್ ಪೂಂಜಾ ಅರಣ್ಯ ಅಧಿಕಾರಿಯನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು ಎಂಬ ಆರೋಪವಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮೋದಿ ದೀರ್ಘಾಯಸ್ಸು, ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ
Advertisement
Advertisement
ಸದ್ಯ ಬೀದರ್‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ಸಂಧ್ಯಾ ಸಚಿನ್ ವರ್ಗಾವಣೆಯಾಗಿದ್ದಾರೆ. ಈ ನಡುವೆ ಹರೀಶ್ ಪೂಂಜಾ, ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರಕ್ಕೆ ಬಸವರಾಜ ಬೊಮ್ಮಾಯಿ ಸಹಿ ಹಾಕಿರುವ ಪತ್ರದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಗಮನಿಸಿ ಶಾಸಕರು ಮರಗಳ್ಳರಿಗೆ ಬೆಂಬಲಿಸಿ ದ್ವೇಷದಿಂದ ವರ್ಗ ಮಾಡಿದ್ದಾರೆ ಎಂದು ಸಂಧ್ಯಾ ಸಚಿನ್ ಆರೋಪಿಸಿದ್ದಾರೆ. ಇದನ್ನೂ ಓದಿ: ನೈಟ್ ಕರ್ಫ್ಯೂ ರದ್ದು – ಸಿನಿಮಾಗೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ
Advertisement
ಶಾಸಕರು ಕೋಪಗೊಂಡು ನನ್ನಲ್ಲಿ ವೈಯಕ್ತಿಕ ದ್ವೇಷ ಹಗೆತನ ಸಾಧಿಸಿ ಬೀದರ್‌ಗೆ ವರ್ಗಾವಣೆ ಮಾಡಿದ್ದಾರೆ. ಇದು ಏಕಪಕ್ಷೀಯ ಆದೇಶ ಎಂದು ಆರೋಪಿಸಿ ಸಂಧ್ಯಾ ಸಚಿನ್ ನ್ಯಾಯ ಒದಿಗಿಸಿಕೊಡಿ ಎಂದು ಬೆಳ್ತಂಗಡಿ ನಾರಾಯಣ ಗುರು ಸ್ವಾಮಿ ಸೇವಾ ಸಂಘಟನೆಗೆ ಪತ್ರ ಬರೆದಿದ್ದಾರೆ. ಇದೀಗ ಸಂಧ್ಯಾ ಸಚಿನ್ ಬರೆದಿರುವ ಪತ್ರ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಒಟ್ಟಿನಲ್ಲಿ ಸರ್ಕಾರಿ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಸಂಘರ್ಷ ಪದೇ ಪದೇ ರಾಜ್ಯದಲ್ಲಿ ಸದ್ದು ಮಾಡುತ್ತಿದೆ.