ಬೀದರ್: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.
ಏಪ್ರಿಲ್ 10ರ ಒಳಗೆ ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಕೊನೆಯದಾಗಿ ಗಡುವು ನೀಡಿದ್ದಾರೆ. ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲು
Advertisement
Advertisement
ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ – ಠಾಣೆ ಮೆಟ್ಟಿಲೇರಿದ ಮಹಿಳೆಯರು!
Advertisement
Advertisement
ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ. ಇದನ್ನೂ ಓದಿ: ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ