ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಗೆಹ್ಲೋಟ್ (Thawar Chand Gehlot) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಸಿಎ ನಿವೇಶನದ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
Advertisement
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ (Chalavadi Narayanaswamy) ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹಚ್ಚಿನ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಪ್ರಕರಣ: ವಾರ್ಡನ್ ಅಮಾನತು
Advertisement
Advertisement
ಛಲವಾದಿ ಆರೋಪ ಏನು?
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಕುಟುಂಬಕ್ಕೆ ಸಿಎ ಸೈಟ್ ಹಂಚಿಕೆ ಮತ್ತೊಂದು ಮುಡಾ ಹಗರಣ- ಛಲವಾದಿ ನಾರಾಯಣಸ್ವಾಮಿ
Advertisement
ಟ್ರಸ್ಟ್‌ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವು ಲೋಪಗಳಾಗಿವೆ. ಈ ಅಕ್ರಮದಿಂದ ಸರ್ಕಾರಕ್ಕೆ ಸುಮಾರು ರೂ1,000 ಕೋಟಿ ನಷ್ಟವಾಗಿದೆ. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಹಲವರಿಗೆ ತಿಳಿಯದಂತಾಗಿದೆ. ಇದು KIADB ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದರು.