ಮುಂಬೈ: ರಾಜಧಾನಿ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರೋಧಿಸಿದ್ದಾರೆ.
ರಾಜ್ಯಪಾಲರು ಅವರ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳಿದ್ದಾರೆ. ಆದರೆ ನಾವು ಅವರ ಹೇಳಿಕೆಗಳನ್ನು ಒಪ್ಪುವುದಿಲ್ಲ. ರಾಜ್ಯಪಾಲರ ಹುದ್ದೆ ಸಾಂವಿಧಾನಿಕ ಹುದ್ದೆ. ಅವರು ಸಂವಿಧಾನದ ನೈತಿಕತೆಯ ಅಡಿಯಲ್ಲಿ ಮಾತನಾಡಬೇಕು. ಮುಂಬೈಗೆ ಮರಾಠಿಗರ ಕೊಡುಗೆಯನ್ನು ನಾವು ಎಂದಿಗೂ ಮರೆಯಲಾಗುವುದಿಲ್ಲ ಎಂದು ಶಿಂದೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ
Advertisement
Advertisement
ಮುಂಬೈಯನ್ನು ಮಹಾರಾಷ್ಟ್ರದ ರಾಜಧಾನಿಯನ್ನಾಗಿ ಮಾಡಲು 105 ಜನರು ಆಂದೋಲನದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರು. ಮುಂಬೈನ ಮರಾಠಿ ಅಸ್ಮಿತೆ ಕಾಪಾಡುವಲ್ಲಿ ಶಿವಸೇನಾ ಸಂಸ್ಥಾಪಕ ದಿವಂಗತ ಬಾಳ ಠಾಕ್ರೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶಿಂದೆ ತಿಳಿಸಿದ್ದಾರೆ.
Advertisement
ʻನಾನು ಇಲ್ಲಿನ ಜನರಿಗೆ ಹೇಳಬಯಸುತ್ತೇನೆ. ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ, ವಿಶೇಷವಾಗಿ ಮುಂಬೈ ಮತ್ತು ಥಾಣೆಯಿಂದ ಹೊರಹಾಕಿದರೆ ನಿಮ್ಮ ಬಳಿ ಹಣವಿರುವುದಿಲ್ಲ. ಮುಂಬೈ ಆರ್ಥಿಕ ರಾಜಧಾನಿಯಾಗಿ ಉಳಿಯುವುದಿಲ್ಲʼ ಎಂದು ಕೋಶಿಯಾರಿ ಹೇಳಿಕೆ ನೀಡಿದ್ದರು.
Advertisement
ಕೋಶಿಯಾರಿ ಅವರ ಹೇಳಿಕೆ ವಿವಾದಕ್ಕೆ ತಿರುಗಿತು. ಮಹಾರಾಷ್ಟ್ರದಲ್ಲಿ ರಾಜ್ಯಪಾಲರ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಯಿತು. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI
ತಮ್ಮ ಹೇಳಿಕೆ ವಿವಾದ ಪಡೆದ ನಂತರ ಎಚ್ಚೆತ್ತ ಕೋಶಿಯಾರಿ ಅವರು ಸ್ಪಷ್ಟನೆ ನೀಡಿದರು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮರಾಠಿ ಮಾತನಾಡುವ ಜನರ ಶ್ರಮವನ್ನು ತುಚ್ಛೀಕರಿಸುವ ಉದ್ದೇಶ ನನಗಿಲ್ಲ ಎಂದು ಹೇಳಿದ್ದಾರೆ.