ಕಾರವಾರ: ಕೇಂದ್ರದ ವಿರೋಧ ಪಕ್ಷಗಳು ಯಾವ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದೆಯೋ ಎಲ್ಲಾ ಸರ್ಕಾರವನ್ನು ಅಸ್ಥಿರ ಮಾಡುವ ಕಾರ್ಯವನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಅದಕ್ಕಾಗಿ ಆಯಾ ರಾಜ್ಯದ ರಾಜ್ಯಪಾಲರು (Governer) ಏಜೆಂಟರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ (RV Deshpande) ಕಿಡಿಕಾರಿದ್ದಾರೆ.
ಸೋಮವಾರ ಕಾರವಾರದಲ್ಲಿ (Karwar) ಕಾಂಗ್ರೆಸ್ (Congress) ಪಕ್ಷದಿಂದ ರಾಜ್ಯಪಾಲರ ನಡೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯಪಾಲರು ಸರ್ಕಾರವನ್ನು ಅಸ್ಥಿರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಬಿಜೆಪಿಯ ಆದೇಶದ ಮೇಲೆ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ. ರಾಜ್ಯಪಾಲರು ಈ ರೀತಿಯ ನಿರ್ಧಾರಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ. ರಾಜ್ಯಪಾಲರ ಮುಂದೆ ಹಲವಾರು ಪ್ರಕರಣಗಳು ಪೆಂಡಿಗ್ ಇದೆ. ಶಶಿಕಲಾ ಜೊಲ್ಲೆ, ನಿರಾಣಿ, ಕುಮಾರಸ್ವಾಮಿ ಅವರ ಪ್ರಕರಣ ಹಲವು ವರ್ಷದಿಂದ ಪೆಂಡಿಂಗ್ ಇದೆ. ಇದನ್ನು ಏಕೆ ಪೆಂಡಿಂಗ್ ಇಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾನು ಯಾವುದೇ ತಪ್ಪು ಮಾಡಿಲ್ಲ.. ನ್ಯಾಯಾಲಯದಲ್ಲಿ ಪರಿಹಾರ ಸಿಗುವ ವಿಶ್ವಾಸ ಇದೆ: ಸಿದ್ದರಾಮಯ್ಯ
ಇದಲ್ಲದೇ ಸರ್ಕಾರದ ಐದು ಗ್ಯಾರಂಟಿಗಳು ನಡೆಯಬಾರದು. ಸರ್ಕಾರ ಅಸ್ಥಿರ ಆಗಬೇಕು ಎಂಬ ನಿಟ್ಟಿನಲ್ಲಿ ಬಿಜೆಪಿ ಕೆಲಸ ಮಾಡುತ್ತಿದೆ. ರಾಜ್ಯಪಾಲರನ್ನು ಹಿಡಿದುಕೊಂಡು ಹಿಂದಿನ ಬಾಗಿಲಿನಿಂದ ಪ್ರಹಾರ ಮಾಡುತಿದ್ದಾರೆ. ಇದರ ಹೊಡೆತ ಬೀಳುವುದಿಲ್ಲ. ಅವರಿಗೆ ತಿರುಗೇಟು ಆಗುತ್ತದೆ ಎಂದರು. ಇದನ್ನೂ ಓದಿ: ನನ್ನ ರಾಜೀನಾಮೆ ಕೇಳೋ ಅಶೋಕ್ ಮೊದಲು ವಾಸ್ತವಾಂಶ ತಿಳಿಯಲಿ: ಸಿದ್ದರಾಮಯ್ಯ
ಪ್ರತಿಭಟನೆಯಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ದೂರು ನೀಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಏನಾದರೂ ಗಲಾಟೆಯಾದರೆ ಅದಕ್ಕೆ ರಾಜ್ಯಪಾಲರೇ ಹೊಣೆ – ಜಮೀರ್ ಅಹ್ಮದ್ ಎಚ್ಚರಿಕೆ