ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ ಕಾರ್ಯಕ್ರಮದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳು ವ್ಯಕ್ತಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದು ಸೂಚಿಸಿದ್ದಾರೆ. ಇದನ್ನೂ ಓದಿ: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ
Advertisement
Advertisement
ಸಿದ್ದು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್.ಶಿವಣ್ಣ (B.S.Shivanna) ಎಂಬ ವ್ಯಕ್ತಿ ಕ್ರಿಮಿನಲ್ ಹಿನ್ನಲೆ ಉಳ್ಳವರಾಗಿದ್ದಾರೆ. ಇಂತಹವರು ಸಿಎಂ ಪದಗ್ರಹಣ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಭದ್ರತಾ ಲೋಪ ಮತ್ತು ಕಾನೂನು ಉಲ್ಲಂಘನೆ ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಹೆಚ್.ವಿಶ್ವನಾಥ್ (H.Vishwanath) ಪತ್ರ ಬರೆದಿದ್ದರು.
Advertisement
Advertisement
ಎಚ್.ವಿಶ್ವನಾಥ್ ಪತ್ರದ ಆಧಾರ ಮೇಲೆ ಸಿಎಸ್‌ಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರು, ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಟಿಕೆಟ್.. ಟಿಕೆಟ್.. ಟಿಕೆಟ್.. – ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು!