ಅಮರಾವತಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರು ತಿರುಪತಿಗೆ (Tirupati) ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದಿದ್ದಾರೆ.
ಬುಧವಾರ ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಕರ್ನಾಟಕದ ರಾಜ್ಯಪಾಲ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ಪ್ರಸಂಗ ಬಂದ್ರೆ ನಾನೇ ಸ್ಪರ್ಧೆ ಮಾಡ್ತೀನಿ: ಶಾಮನೂರು ಶಿವಶಂಕರಪ್ಪ
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು.