ಮಡಿಕೇರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಕುಟುಂಬ ಸಮೇತರಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದರು.
Advertisement
ಇಲ್ಲಿನ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಗೆಹ್ಲೋಟ್ ಗೌರವ ನಮನ ಸಲ್ಲಿಸಿದರು. ಬಳಿಕ ಅಲ್ಲಿನ ಯುದ್ಧ ಟ್ಯಾಂಕ್, ಯುದ್ಧ ವಿಮಾನ, ಯುದ್ಧ ಹಡಗು ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ಜನರಲ್ ತಿಮ್ಮಯ್ಯ ಅವರ ಬಾಲ್ಯದ ಜೀವನ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹಾರಾಡಿದ ಮಾನವರಹಿತ ಯುದ್ಧ ವಿಮಾನ – DRDO ಪರೀಕ್ಷೆ ಯಶಸ್ವಿ
Advertisement
Advertisement
ಬಳಿಕ ಮಾತನಾಡಿದ ಅವರು, ದೇಶದ ಬಗ್ಗೆ ಜನರಲ್ ತಿಮ್ಮಯ್ಯ ಅವರು ಸಮರ್ಪಣಾ ಭಾವ ಹೊಂದಿದ್ದರು. ದೇಶ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಕೊಂಡಾಡಿದರು.
Advertisement
ಜನರಲ್ ತಿಮ್ಮಯ್ಯ ಅವರ ಬದುಕು, ಜೀವನ ಯುವ ಜನತೆಗೆ ಪ್ರೇರಣಾದಾಯಕವಾಗಿದೆ. ದೇಶದ ಯುವ ಜನತೆ ಕೊಡಗಿಗೆ ಪ್ರವಾಸಕ್ಕೆ ಬಂದಾಗ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡುವಂತಾಗಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದರು. ಇದನ್ನೂ ಓದಿ: ಭಾರೀ ಮಳೆಗೆ ಪಂಜ-ಉಳ್ಯ ಜಲಾವೃತ – ಆತಂಕದಲ್ಲಿ ಕೃಷಿಕರು
ಈ ವೇಳೆ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ ದರ್ಶನಾ, ನಾನಾ ಇಲಾಖೆ ಅಧಿಕಾರಿಗಳು ಇದ್ದರು.