-ಶ್ರೀ ಕ್ಷೇತ್ರ ಧರ್ಮಸ್ಥಳದ 89ನೇ ಸರ್ವಧರ್ಮ ಸಮ್ಮೇಳನಕ್ಕೆ ಚಾಲನೆ
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಅಂಗವಾಗಿ ನಡೆಯುತ್ತಿರುವ 89ನೇ ಸರ್ವಧರ್ಮ ಸಮ್ಮೇಳನಕ್ಕೆ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಚಾಲನೆ ನೀಡಿ, ಸರ್ವಧರ್ಮೀಯರು ಸಂದರ್ಶಿಸುವ ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳ ಎಂದು ಸಂತಸ ವ್ಯಕ್ತಪಡಿಸಿದರು.
Advertisement
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಕ್ಕೆ ಸಂತಸವಾಗುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ಧವಾದ ಸರ್ವಧರ್ಮೀಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್: ಸುಧಾಕರ್
Advertisement
ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಶ್ರೀ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರ ದೇವರ ಆಶೀರ್ವಾದ ಪಡೆದು, ನಂತರ ಮ್ಯೂಸಿಯಂಗೆ ಭೇಟಿ ನೀಡಿದರು. pic.twitter.com/BEwzEXQx4C
— Thaawarchand Gehlot Office (@TcGehlotOffice) December 2, 2021
Advertisement
ಕಾರ್ಯಕ್ರಮದಲ್ಲಿ ಬೆಂಗಳೂರಿನ ಎಸ್-ವ್ಯಾಸ ಯುನಿವರ್ಸಿಟಿಯ ನಿವೃತ ಕುಲಪತಿ ಪ್ರೊ.ರಾಮಚಂದ್ರ ಜಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ.ಸಾರ್ಫಾಜ್ ಚಂದ್ರಗುತ್ತಿ, ಡಾ.ಎಂ.ಎಸ್ ಪದ್ಮ, ಫಾ.ವೀರೇಶ್ ಮೊರಸ್ ಸೇರಿದಂತೆ ವಿವಿಧ ಧರ್ಮಗಳ ಪ್ರತಿನಿಧಿಗಳು, ವಿಧ್ವಾಂಸರು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್ ಪತ್ತೆ!
Advertisement