ಬೆಂಗಳೂರು: ಶ್ವಾಸ ಯೋಗ ಸಂಸ್ಥೆ ವತಿಯಿಂದ ನಗರದ ಜಯಮಹಲ್ ರಸ್ತೆಯಲ್ಲಿರುವ ಚಾಮರವರ್ಜ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮೈಸೂರಿನ ಸಚ್ಚಿದಾನಂದ ಆಶ್ರಮದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ `ಯೋಗ ರತ್ನ-2022′ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಇದನ್ನೂ ಓದಿ: ಪಾಸಿಟಿವಿಟಿ ರೇಟ್ ಶೇ. 2.07ಕ್ಕೆ ಏರಿಕೆ – ಬೆಂಗ್ಳೂರಲ್ಲಿ 545 ಕೇಸ್
ಬಳಿಕ ಮಾತನಾಡಿದ ರಾಜ್ಯಪಾಲರು, ಯೋಗ ನಮ್ಮ ಭಾರತೀಯ ಸಂಸ್ಕೃತಿಯ ಭಾಗ. ಈ ಸಂಸ್ಕೃತಿಯನ್ನು ಉಳಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ನೈತಿಕ ಜವಾಬ್ದಾರಿಯಾಗಿದೆ. ಯೋಗವು ಹಲವು ವರ್ಷಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಮಾರ್ಗದರ್ಶಿ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಯೋಗದ ಮಹತ್ವ ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೆಲವು ವರ್ಷಗಳ ಹಿಂದೆ ಯೋಗಕ್ಕೆ ಆಯುರ್ವೇದ ರೂಪದಲ್ಲಿ ಮಾತ್ರ ಪ್ರಾಮುಖ್ಯತೆ ನೀಡಲಾಗುತ್ತಿತ್ತು. ಆದರೆ ಪ್ರಸ್ತುತ ಸಮಯದಲ್ಲಿ, ಯೋಗಕ್ಕೆ ವೈಜ್ಞಾನಿಕವಾಗಿಯೂ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಸಿಸಿಟಿವಿ ಅಳವಡಿಕೆ ಕಾಮಗಾರಿ – ಜೆಸಿಬಿಗೆ ಅಡ್ಡನಿಂತು ಸ್ಥಳೀಯರ ಹೈಡ್ರಾಮಾ
ಯೋಗವು ಕೇವಲ ವ್ಯಾಯಾಮವಲ್ಲ, ವಿಜ್ಞಾನದ ರೂಪಕ. ಈ ನಿಟ್ಟಿನಲ್ಲಿ ವಿಶ್ವದಾದ್ಯಂತ ಯೋಗದ ಮಹತ್ವ ಹರಡಲು ಶ್ವಾಸ ಯೋಗ ಸಂಸ್ಥೆ ಕಳೆದ ಒಂದು ದಶಕದಿಂದ ಕೆಲಸ ಮಾಡುತ್ತಿರುವುದು ಸಂತಸ ಎಂದು ಶ್ಲಾಘಿಸಿದರು. ಸಮಾರಂಭದಲ್ಲಿ ವಚನಾನಂದ ಸ್ವಾಮೀಜಿ, ಹಲವು ಗಣ್ಯರು ಉಪಸ್ಥಿತರಿದ್ದರು.