ಹಾಸನ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಹೊಯ್ಸಳ ಅರಸರ ರಾಜಕೀಯ ಕಾರ್ಯಕ್ಷೇತ್ರವಾಗಿದ್ದ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೆಬೀಡು ದೇವಾಲಯಗಳಿಗೆ ಭೇಟಿ ನೀಡಿದರು.
Advertisement
ಐತಿಹಾಸಿಕ ವಿಶೇಷತೆಯ, ಒಂದು ಕಾಲದಲ್ಲಿ ಹೊಯ್ಸಳ ವಾಸ್ತು ಶಿಲ್ಪ ಶೈಲಿಯ ಕಂಡು ವಿಸ್ಮಿತರಾದರು. ಗೈಡ್ ಅಸ್ಲಾಮ್ ಷರಿಫ್ ಅವರು ಬೇಲೂರು, ಹಳೇಬೀಡು ಶಿಲ್ಪ ಶೈಲಿ ಕುರಿತು ರಾಜ್ಯಪಾಲರಿಗೆ ವಿವರಿಸಿದರು. ನಂತರ ಚೇನ್ನಕೇಶವ ಹಾಗೂ ಹೊಯ್ಸಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಗಳ ಅರ್ಚಕರು ರಾಜ್ಯಪಾಲರನ್ನು ಸನ್ಮಾನಿಸಿದರು. ಇದನ್ನೂ ಓದಿ: ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?
Advertisement
Advertisement
ಈ ಸಂದರ್ಭದಲ್ಲಿ ಶಾಸಕರಾದ ಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಆರ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಎನ್ ನಂದಿನಿ, ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಯಲ್, ತಹಸೀಲ್ದಾರ್ ಮೋಹನ್, ಚೆನ್ನಕೇಶವ ದೇವಾಲಯದ ಆಡಳಿತ ಅಧಿಕಾರಿ ವಿಧ್ಯುಲ್ಲತಾ, ಚೆನ್ನಕೇಶವ ದೇವಾಲಯದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಡಾ. ನಾರಾಯಣಸ್ವಾಮಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.