ಬೆಳಗಾವಿ: ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳ ಕಾಲ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರವಾಸ ಕೈಗೊಂಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಆಗಮಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ನಾಳೆ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಹಾಗೂ ನಾಡಿದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ
ಇದೇ ವೇಳೆ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಂ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕರಿಸಿದ್ದಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ