ಮಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಅವರ ಪತ್ನಿ ಅನಿತಾ ಗೆಹ್ಲೋಟ್ ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
Advertisement
ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಗೆಹ್ಲೋಟ್ ಅವರನ್ನು ದೇವಸ್ಥಾನ ಹಾಗೂ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಇದನ್ನೂ ಓದಿ: ನಾಳೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
Advertisement
Advertisement
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಸರ್ಕಾರದ ಭಾಗವಾಗಿರಲ್ಲ ಎಂದಿದ್ದ ಫಡ್ನವೀಸ್‌ಗೆ ಡಿಸಿಎಂ ಪಟ್ಟ