ದೇಶವೇ ಪರಮೋಚ್ಛ ಎಂದು ಭಾವಿಸಿ – ರಾಜ್ಯಪಾಲರ ಕರೆ

Public TV
2 Min Read
cooperatives felicitate 2

ಬೆಂಗಳೂರು: ಬದುಕಿಗೆ ಅರ್ಥ ಕಲ್ಪಿಸಲು, ಸಾಮಾಜಿಕ ಅಸಮಾನತೆ, ಅನಿಷ್ಟ ಪದ್ಧತಿ, ವ್ಯಸನಗಳಿಂದ ದೂರವಿದ್ದು, ದೇಶವೇ ಪರಮೋಚ್ಛ ಎಂದು ಭಾವಿಸಿ, ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌‌ (Thawarchand Gehlot) ಕರೆ ನೀಡಿದರು.

ನಗರದ ಯವನಿಕಾ ಸಂಭಾಂಗಣದಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಸಂಘಟನೆ ವತಿಯಿಂದ ಆಯೋಜಿಸಿದ್ದ 14ನೇ ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಸಿದ್ದರಾಮಯ್ಯ ದುಡ್ಡು ಪಡೆದಿದ್ದಾರೆ – ಸಿಎಂ ಇಬ್ರಾಹಿಂ

cooperatives felicitate 2

ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದಿಂದ ಧಾರ್ಮಿಕ, ಸಾಂಸ್ಕೃತಿಕ, ಪ್ರಾಕೃತಿಕ ಮತ್ತು ಭೌಗೋಳಿಕ ಮಾಹಿತಿಯೊಂದಿಗೆ ನೋಡುವ, ಕೇಳುವ, ಓದುವ ಮತ್ತು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ನಾವು ಪರಸ್ಪರ ಅರ್ಥ ಮಾಡಿಕೊಳ್ಳಲು ಹಾಗೂ ದೇಶದ ಅಭಿವೃದ್ಧಿ ಮತ್ತು ಪ್ರಗತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಪಡೆಯುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಛತ್ತೀಸಗಡ, ಜಾರ್ಖಂಡ್, ಒರಿಸ್ಸಾ ಹಾಗೂ ಬಿಹಾರ ರಾಜ್ಯಗಳ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದಿದ ಕರ್ನಾಟಕ ರಾಜ್ಯದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಉಡುಗೆ, ಆಹಾರ ಮತ್ತು ಇತರ ಅಂಶಗಳನ್ನು ಪರಿಚಯಿಸಿಕೊಳ್ಳುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

Narendra Modi 1 3

ದೇಶದ ಪ್ರಧಾನ ಮಂತ್ರಿಗಳ ಚಿಂತನೆಯು “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್” ಆಗಿದೆ. ಈ ಚಿಂತನೆಯೊಂದಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ನಿರ್ಧರಿಸಲಾಗಿದೆ. ಬುಡಕಟ್ಟು ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿವೆ. ಈ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆನೀಡಿದರು.

ದೇಶದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಮತ್ತು ಈಗಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಡತನದಿಂದ ಬಂದವರು. ಆದರೆ ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದ ಅವರು ದೇಶದ ಅತ್ಯುನ್ನತ ಸ್ಥಾನವನ್ನು ತಲುಪಿದರು. ಅವರ ಜೀವನ ಪರಿಚಯದಿಂದ ನೀವು ಸ್ಫೂರ್ತಿ ಪಡೆಯಬಹುದು ಎಂದು ತಿಳಿಸಿದರು.

ಹವಾಮಾನ ಬದಲಾವಣೆ ಇಂದು ಜಾಗತಿಕ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಪರಿಸರ ಸಂರಕ್ಷಣೆಗಾಗಿ ಮರಗಳನ್ನು ನೆಡಬೇಕು. ಮರಗಳನ್ನು ಕಡಿಯದಂತೆ ಉಳಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ನಿಮ್ಮ ಪಾತ್ರ ಮಹತ್ವದ್ದು. ಬುಡಕಟ್ಟು ಯುವ ವಿನಿಮಯ ಕಾರ್ಯಕ್ರಮದ ಮೂಲಕ ಕೌಶಲ್ಯ ಅಭಿವೃದ್ಧಿ ಮತ್ತು ಕೈಗಾರಿಕೆ, ಹೊಸ ತಂತ್ರಜ್ಞಾನ, ತಂತ್ರಜ್ಞಾನ, ತಜ್ಞರನ್ನು ಆಲಿಸಿ ವೃತ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯುವುದು, ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಮತ್ತು ಅದರ ಸಾಂಸ್ಕೃತಿಕ ಮತ್ತು ಭೌಗೋಳಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದು. ಪರಿಚಯ ಮಾಡಿಕೊಳ್ಳುವ ಅವಕಾಶ ಸಿಗಲಿದೆ. ಈ ಮಾಹಿತಿಯು ನಿಮ್ಮ ಒಟ್ಟಾರೆ ಅಭಿವೃದ್ಧಿಯಲ್ಲಿ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಸಹಾಯಕವಾಗುತ್ತದೆ. ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *