ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ (HD Devegowda) ಪತ್ನಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಹೆಚ್‌ಡಿಡಿ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ.
ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮಳೆ ಅಬ್ಬರ – ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಾಜಿ ಪ್ರಧಾನಿ ಶ್ರೀ ಎಚ್.ಡಿ.ದೇವೆಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ನಿಧನರಾದ ಹಿನ್ನೆಲೆಯಲ್ಲಿ ಇಂದು ಮಾನ್ಯ ದೇವೆ ಗೌಡರ ಪದ್ಮನಾಭ ನಗರದ ನಿವಾಸಕ್ಕೆ ಭೇಟಿ ನೀಡಿ ಸಂತಾಪ ವ್ಯಕ್ತಪಡಿಸಲಾಯಿತು. ದೇವೆಗೌಡರ ಬೆನ್ನೆಲುಬಾಗಿದ್ದ ಚೆನ್ನಮ್ಮ ನವರು ದೈವ ಭಕ್ತರು ಹಾಗೂ ಆದರ್ಶ ಗೃಹಿಣಿಯಾಗಿದ್ದರು. ಮನೆಗೆ ಭೇಟಿ ನೀಡುತ್ತಿದ್ದ ಕಾರ್ಯಕರ್ತರು,… pic.twitter.com/hDaRDiwGYx
— Basanagouda R Patil (Yatnal) (@BasanagoudaBJP) July 24, 2026
ಇನ್ನೂ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು ಕೂಡ ಇಂದು (ಜು.24) ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ, ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ.
