– ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಫುಲ್ ಮಾರ್ಕ್ಸ್
– ಭ್ರಷ್ಟಾಚಾರ, ಮಹದಾಯಿ ವಿಚಾರವೂ ಪ್ರಸ್ತಾಪ
ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಭಾಷಣದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಗೆ ಫುಲ್ ಮಾರ್ಕ್ಸ್ ಸಿಕ್ಕಿದೆ. ನಿನ್ನೆಯಷ್ಟೇ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ, ಮರ್ಡರ್ ಸರ್ಕಾರ ಎಂದು ಪ್ರಧಾನಿ ಮೋದಿ ಹೇಳಿದ್ದರೆ, ರಾಜ್ಯಪಾಲರ ಭಾಷಣದಲ್ಲಿ ಕಾನೂನು ಸುವ್ಯವಸ್ಥೆಗೆ ಫುಲ್ ಶಹಬ್ಬಾಸ್‍ಗಿರಿ ಸಿಕ್ಕಿದೆ.
Advertisement
ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಿ.ಆರ್.ವಾಲಾ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪರಿಣಾಮಕಾರಿ ಕ್ರಮ ಕೈಗೊಂಡಿದೆ. ಕೋಮು ಸೌಹಾರ್ದ ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ರಾಜ್ಯ ಸರ್ಕಾರ ಖಾತ್ರಿಪಡಿಸಿದೆ. ಕೋಮು ಹಿಂಸಾ ಘಟನೆಗಳ ಬಗ್ಗೆ ದೃಢವಾದ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
Advertisement
ನಿನ್ನೆ ಪ್ರಧಾನಿ ಮೋದಿ ಭಾಷಣದ ವೇಳೆ ಮೌನ ವಹಿಸಿದ್ದ ಮಹದಾಯಿ ವಿಚಾರ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾಯಿತು. ಮಹದಾಯಿ ಜಲಾನಯನ ಪ್ರದೇಶದ ಜನರ ಹಕ್ಕಿನ ಪಾಲನ್ನು ದೊರಕಿಸಿಕೊಡಲು ಎಲ್ಲ ರೀತಿ ಪ್ರಯತ್ನ ಮಾಡುತ್ತೇವೆ ಎಂದು ರಾಜ್ಯಪಾಲರು ಹೇಳಿದರು. ಕಾವೇರಿ, ಕೃಷ್ಣಾ ಜಲಾನಯನ ಪ್ರದೇಶಗಳ ನ್ಯಾಯಯುತ ನೀರಿನ ಬೇಡಿಕೆ ಈಡೇರಿಸಲು ಬದ್ಧ. ರಾಜ್ಯಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ಸರ್ಕಾರದ ಬದ್ಧತೆ ಮುಂದುವರಿಯುತ್ತದೆ ಎಂದು ಹೇಳಿದರು.
Advertisement
ರಾಜ್ಯಪಾಲರ ಭಾಷಣದಲ್ಲಿ ಭ್ರಷ್ಟಾಚಾರದ ಬಗ್ಗೆಯೂ ಪ್ರಸ್ತಾಪವಾಯಿತು. ಸಾರ್ವಜನಿಕ ಸೇವೆಗಳಲ್ಲಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆದಿದೆ. ಇದಕ್ಕಾಗಿಯೇ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ ಆರಂಭಿಸಿದೆ. ಎಸಿಬಿ ಆರಂಭವಾದ ದಿನದಿಂದ ಇದುವರೆಗೆ 278 ಟ್ರ್ಯಾಪ್ ಪ್ರಕರಣ, 65 ದಾಳಿ, 61 ಇತರೆ ಪ್ರಕರಣ ಸೇರಿ ಒಟ್ಟು 404 ಪ್ರಕರಣ ದಾಖಲಾಗಿದೆ. ಎಸಿಬಿ ಆರಂಭದ ದಿನದಿಂದ ಸರ್ಕಾರವು ಸ್ವೀಕರಿಸಿದ 106 ಪ್ರಕರಣಗಳಲ್ಲಿ 72 ಪ್ರಕರಣಗಳಿಗೆ ಅಭಿಯೋಜನಾ ಮಂಜೂರಾತಿ ಆದೇಶ ಹೊರಡಿಸಿದ್ದೇವೆ ಅಂದ್ರು.
Advertisement
ಬಿಜೆಪಿ ಆಕ್ಷೇಪ: ಇದೇ ವೇಳೆ ರಾಜ್ಯಪಲಾರ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯಪಾಲರ ಭಾಷಣ ಸುಳ್ಳು, ರಾಜ್ಯಪಾಲರನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾಜ್ಯ ಸರ್ಕಾರ ವಸ್ತು ಸ್ಥಿತಿ ಮರೆ ಮಾಚಿ ಸುಳ್ಳು ಅಂಕಿ ಅಂಶಗಳನ್ನು ಕೊಟ್ಟಿದೆ. ರಾಜ್ಯಪಾಲರ ಮುಖಾಂತರ ಕ್ರೈಂ ಮಾಡಿಸಿದೆ. ರಾಜ್ಯದಲ್ಲಿ ಕೊಲೆಗಳು ನಡೆಯುತ್ತಿದೆ. ರಾಜ್ಯದಲ್ಲಿರೋದು ಮರ್ಡರ್ ಸರ್ಕಾರ ಎಂದು ನಿನ್ನೆ ಬಿಜೆಪಿ ಸಮಾವೇಶದಲ್ಲಿ ಮೋದಿ ಹೇಳಿದ ಮಾತನ್ನೇ ಶೆಟ್ಟರ್ ಕೂಡಾ ಹೇಳಿದ್ದಾರೆ.