ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೃತಪಟ್ಟ 6 ಯಾತ್ರಾರ್ಥಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ನೀಡುವುದಾಗಿ ಸಚಿವ ಗೋವಿಂದ ಕಾರಜೋಳ (Govind Karjol) ಘೋಷಿಸಿದರು.
ಈ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಅವರು, ಸವದತ್ತಿಗೆ (Savadatti) ಹೊರಟಿದ್ದಾಗ ಈ ಅವಘಡ ನಡೆದಿದ್ದು, ಮೃತ ಕುಟುಂಬದ ಜೊತೆಗಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸೂಚಿಸಿದರು. ಸಿಎಂ ಬೊಮ್ಮಾಯಿ ಸೂಚನೆ ಮೇರೆಗೆ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದೇನೆ ಎಂದರು.
ಇನ್ನೂ ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಡಿಎಚ್‍ಒ ಜೊತೆಗೂ ಮಾತನಾಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಖೇದ ವ್ಯಕ್ತಪಡಿಸಿದರು. ಇದನ್ನೂ ಓದಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ನಗರ ಸಜ್ಜು- ಶುಕ್ರವಾರದಿಂದ 3 ದಿನಗಳ ಕಾಲ ಕನ್ನಡ ಹಬ್ಬ
ಗುರುವಾರ ಯಾತ್ರಾರ್ಥಿಗಳು ತೆರಳುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಆಲದ ಮರಕ್ಕೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಐವರು ಭಕ್ತರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k