ನಮ್ಮ ಸರ್ಕಾರದಲ್ಲಿ ಮಾಫಿಯಾಗಳಿಗೆ ಅವಕಾಶ ಇಲ್ಲ: ಗೋವಿಂದ ಕಾರಜೋಳ

Public TV
2 Min Read
GovindKarjol

ಬೆಳಗಾವಿ: ನಮ್ಮ ಪಾಲಿನ ನೀರನ್ನು ಉಪಯೋಗ ಮಾಡಿಕೊಳ್ಳಲು ಯೋಜನೆ ಮಾಡಲು ಯಾವುದೇ ರೀತಿ ಹಿಂದೆ, ಮುಂದೆ ನೋಡುವುದಿಲ್ಲ. ನಮ್ಮ ಸರ್ಕಾರದಲ್ಲಿ ಮಾಫಿಯಾಗಳಿಗೆ ಯಾವುದೇ ರೀತಿ ಅವಕಾಶ ಇಲ್ಲ ಎಂದು ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

bgk govinda karajola

ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀರಾವರಿ ಮಂತ್ರಿಯಾಗಿ ನಾನು ಒಂದು ತಿಂಗಳಾಗಿದೆ. ಈ ಅವಧಿಯಲ್ಲಿ ಸಿಎಂ ಜೊತೆ ಎರಡು ಬಾರಿ ದೆಹಲಿಗೆ ಹೋಗಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರಸಿಂಗ್ ಶೇಖಾವತ್ ಜೊತೆಗೆ ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ಸಭೆ ನಡೆಸಿದ್ದೇನೆ. ಅದೇ ರೀತಿ ಕಾನೂನು ತಜ್ಞರ ಜೊತೆಗಿನ ಸಭೆಯಲ್ಲಿ ಅಂತರರಾಜ್ಯ ಜಲವಿವಾದಗಳಲ್ಲಿ ನಮ್ಮ ಪರವಾಗಿ ತೀರ್ಪು ಬರುವಂತೆ ವಾದ ಮಾಡುವಂತೆ ಮುಖ್ಯಮಂತ್ರಿಗಳು ಕೂಡ ಖಡಕ್ಕಾಗಿಯೇ ಸೂಚನೆ ಕೊಟ್ಟಿದ್ದಾರೆ. ಅಲ್ಲದೇ ಸಿಡಬ್ಲೂಸಿ ಅಧಿಕಾರಿಗಳ ಜೊತೆಗೆ ಮೀಟಿಂಗ್ ಮಾಡಿದ್ದೇವೆ. ಎತ್ತಿನಹೊಳೆ ಯೋಜನೆಯಲ್ಲಿ ನಮಗೆ 24 ಟಿಎಂಸಿ ನೀರು ಬರಲಿದೆ. ಅಲ್ಲದೇ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಖಂಡಿತವಾಗಲೂ ನಮ್ಮ ಪಾಲಿನ ನೀರನ್ನು ಉಪಯೋಗಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಶಿಷ್ಯ ಸಂತೋಷ್ ಲಾಡ್ ಅಸಮಾಧಾನ

FotoJet 3 medium

ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಬೊಮ್ಮಾಯಿಯವರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಐತಿಹಾಸಿಕ ನಗರ ಎನ್ನುವುದು ಸಾಬೀತು ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳು ಆಗಬೇಕು ಎಂಬ ಬಗ್ಗೆ ಶಾಸಕರು, ಸಂಸದರು ತೀರ್ಮಾನಿಸುತ್ತಾರೆ. ಅದೆಲ್ಲವನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಅದೇ ರೀತಿ ಬೆಳಗಾವಿಯ ಬೈಪಾಸ್ ರಸ್ತೆಗೆ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದೇವೆ. ಕಾಮಗಾರಿ ಪ್ರಕ್ರಿಯೆ ಶುರುವಾಗಿದ್ದು, ಆದಷ್ಟು ಬೇಗನೆ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಬಹುಮಹಡಿ ಕಟ್ಟಡದಿಂದ ಬಿದ್ದು ವ್ಯಕ್ತಿ ದುರ್ಮರಣ

BASAVARAJ BOMMAI

ಬೆಳಗಾವಿ ಜಿಲ್ಲೆಯ ಕೆಲ ಶಾಸಕರ ಒಗ್ಗಟ್ಟಿನ ಪ್ರಯತ್ನದ ಪ್ರತಿಫಲವಾಗಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಹುತೇಕ ಮೂರು ಮಹಾನಗರ ಪಾಲಿಕೆ ಬಿಜೆಪಿ ಅಧಿಕಾರ ವಹಿಸಲಿದೆ. ಅದೇ ರೀತಿ ಕಲಬುರ್ಗಿ ಪಾಲಿಕೆಯಲ್ಲಿಯೂ ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿ ವೇಳೆ ಸಂಸದೆ ಮಂಗಲ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ನಗರ ಬಿಜೆಪಿ ಜಿಲ್ಲಾಧ್ಯಕ್ಷ ಶಶಿಕಾಂತ ಪಾಟೀಲ್, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *