ಬೆಂಗಳೂರು: ಕುಡಿಯುವ ನೀರು ಪೂರೈಕೆಗೆ ನಲ್ಲಿ (ನಳ) ಮತ್ತು ಮೀಟರ್ ಅಳವಡಿಕೆ ಮೂಲಕ ನೀರು ವ್ಯರ್ಥವಾಗುವುದನ್ನು ತಪ್ಪಿಸುವುದರ ಜೊತೆಗೆ ಪಂಚಾಯಿತಿಗಳಿಗೆ ಆದಾಯವೂ ವೃದ್ಧಿಯಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದಲ್ಲಿ ಜಲಜೀವನ್ ಮಿಷನ್ ಕುರಿತು ಪ್ರಗತಿ ಪರಿಶೀಲನೆಯ ಬಗ್ಗೆ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿ ಗ್ರಾಮದಲ್ಲಿ ಕಳೆದ 7-8 ವರ್ಷಗಳ ಹಿಂದೆ ಪ್ರತಿನಿತ್ಯ 15 ಲಕ್ಷ ಲೀಟರ್ ನೀರು ಬಳಕೆಯಾಗುತ್ತಿತ್ತು. ಆದರೆ ನಳ ಸಂಪರ್ಕ ಮತ್ತು ಮೀಟರ್ ಅಳವಡಿಕೆ ಮೂಲಕ ಈಗ ಕೇವಲ 5 ಲಕ್ಷ ಲೀಟರ್ ನೀರು ಮಾತ್ರ ಬಳಕೆಯಾಗುತ್ತಿದ್ದು, ಪಂಚಾಯಿತಿಗೆ 10 ಲಕ್ಷ ರೂ. ಆದಾಯ ಗಳಿಕೆಯಾಗುತ್ತಿದೆ ಎಂದರು.
Advertisement
Advertisement
ಬಾಗಲಕೋಟೆ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೂಬಾಲನ್ ಅವರು ಜಲ ಜೀವನ್ ಮಿಷನ್ ಪ್ರಗತಿ ಕುರಿತು ವಿವರಿಸಿ, ಜಿಲ್ಲೆಯಲ್ಲಿ ಡಿ.26ರವರೆಗೆ ಶೇ. 108 ರಷ್ಟು ಪ್ರಗತಿ ಸಾಧಿಸಲಾಗಿದೆ. 2021-22ನೇ ಸಾಲಿನ 337 ಯೋಜನೆಗಳ ಪೈಕಿ 293 ಯೋಜನೆಗಳು ಪೂರ್ಣಗೊಂಡಿದ್ದು, ಶೇ.77 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹೊಸ ವರ್ಷ ಸಂಭ್ರಮಾಚರಣೆ ತಡೆಯಲು ಚೆನ್ನೈನಲ್ಲಿ ವಾಹನ ಸಂಚಾರ ಬ್ಯಾನ್
Advertisement
Advertisement
ಈಗಾಗಲೇ ಕೈಗೆತ್ತಿಕೊಂಡಿದ್ದ 48 ಗ್ರಾಮಗಳ ಕಾಮಗಾರಿ ಪೂರ್ಣಗೊಂಡಿದೆ. ಇನ್ನುಳಿದ 147 ಹಳ್ಳಿಗಳಿಗೆ ವಿಸ್ತøತ ಯೋಜನಾ ವರದಿ ತಯಾರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಬಾಗಲಕೋಟೆ ಜಿಲ್ಲೆಯ ಜಲ ಜೀವನ್ ಮಿಷನ್ ಪ್ರಗತಿಯನ್ನು ಮುಖ್ಯಮಂತ್ರಿಗಳು ಪ್ರಶಂಸಿದ್ದಾರೆ ಎಂದರು. ಇದನ್ನೂ ಓದಿ: ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲಿನ ಪುಡಿಗೇ ಕನ್ನ