ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ವಿದ್ಯಾರ್ಥಿಗಳ ರಕ್ಷಣೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಮುಖ್ಯಸ್ಥ ಪ್ರವೀಣ್ ಬಾಗೇವಾಡಿ ಹಾಗೂ ಬೆಳಗಾವಿ ಎಸಿ ರವಿ ಕರಲಿಂಗಣ್ಣವರ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇಬ್ಬರು ನೋಡಲ್ ಅಧಿಕಾರಿಗಳನ್ನು ಮುಂಬೈಗೆ ಕಳುಹಿಸಿಕೊಟ್ಟಿದ್ದು, ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿದರು.
Advertisement
Advertisement
ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಬೇಕಿಲ್ಲ. ಪ್ರಧಾನಿ ಮೋದಿಯವರು ಸತತವಾಗಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಸುರಕ್ಷಿತವಾಗಿ ನಮ್ಮ ರಾಜ್ಯಕ್ಕೆ ಅವರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
Advertisement
Advertisement
ಈಗಾಗಲೇ ಹಲವು ವಿದ್ಯಾರ್ಥಿಗಳು ಆಯಾ ರಾಜ್ಯಗಳಿಗೆ ಸೇರಿದ್ದಾರೆ. ಉಕ್ರೇನ್‍ನಲ್ಲಿ ಕೆಲವರಿಗೆ ನೀರು, ಊಟದ ಸಮಸ್ಯೆಯಾಗಿದೆ. ಜೀವದ ಭಯದಲ್ಲಿದ್ದಾರೆ. ಹೀಗಾಗಿ, ಇಲ್ಲಿನ ತಂದೆ, ತಾಯಿ, ಬಂಧು, ಬಳಗದವರು ನೋವಿನಲ್ಲಿದ್ದಾರೆ. ಯಾರೂ ಆತಂಕ ಪಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ