ಬೆಂಗಳೂರು: ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು.
ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಸೇರಿ ಮನೆಗಳಿಗೂ ಹಾನಿಯಾಗಿದೆ. ಈ ಪರಿಣಾಮ ಅಲ್ಲಿನ ಜನರು ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಜನ ವಾಸಿಸುತ್ತಿದ್ದಾರೆ. ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು. ಇದನ್ನೂ ಓದಿ: ಬಸ್ ಮೇಲೆ ದಾಳಿಗೈದ ಮೂವರು ಉಗ್ರರ ಹತ್ಯೆ
Advertisement
Advertisement
ಸಿಎಂ ಬಸವರಾಜ ಬೊಮ್ಮಾಯಿ ತಕ್ಷಣ ಈ ಕುರಿತು ಪ್ರತಿಕ್ರಿಯಿಸಿದ್ದು, ಇಂಥ ಪ್ರಕರಣಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಬೆಳಗಾವಿ ಪ್ರಕರಣಗಳ ಬಗ್ಗೆ ಕಾರಜೋಳ ಅವರು ಪ್ರಸ್ತಾಪಿಸಿದರು.
Advertisement
Advertisement
ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿ ವಿವರಗಳನ್ನು ಒದಗಿಸಿದ್ದು, 7600 ಪ್ರಕರಣಗಳ ಪುನರ್ ಪರಿಶೀಲನೆ ಮತ್ತು 4 ರಿಂದ 5 ಸಾವಿರ ಪ್ರಕರಣಗಳಲ್ಲಿ ಮೇಲ್ವಿಚಾರಣೆ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ತಿಳಿಸಿದರು. ಇದನ್ನೂ ಓದಿ: RRR ಸಿನಿಮಾ ದೇಹವಾದರೆ ಅಜಯ್ ಆತ್ಮ, ಆಲಿಯಾ ಶಕ್ತಿ: ರಾಜಮೌಳಿ