ವಿಜಯಪುರ: ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆಯೇ ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಮಗ ಉಮೇಶ್ ಕಾರಜೋಳ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ ಬುಕ್ ಅಕೌಂಟ್ ನಲ್ಲಿ ಬರೆದುಕೊಂಡಿರುವ ಅವರು, ಮೋದಿ ಒಕೆ, ಯಡಿಯೂರಪ್ಪ ಟೀಮ್ ಯಾಕೆ ಅಂತಾ ಪ್ರಶ್ನೆ ಹಾಕಿದ್ದಾರೆ. ಈ ಮೂಲಕ ಯಡಿಯೂರಪ್ಪ ತಮಗೆ ಬೇಕಾದವರಿಗೆ ಮಣೆ ಹಾಕಿದ್ದಾರೆ ಎಂದು ಉಮೇಶ್ ಬಹಿರಂಗವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಮೇಶ್ ಕಾರಜೋಳ ವಿಜಯಪುರ ಜಿಲ್ಲೆಯ ನಾಗಠಾಣ ಮೀಸಲು ಮತ ಕ್ಷೇತ್ರದ ಆಕಾಂಕ್ಷಿ ಆಗಿದ್ದು, ತಮಗೆ ಟಿಕೆಟ್ ಕೈ ತಪ್ಪುವ ಭೀತಿಯಲ್ಲಿ ಈ ರೀತಿ ಹಾಕಿದ್ದಾರೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.