ಧಾರವಾಡ: ರಾಜ್ಯದಲ್ಲಿನ ಶಾಲೆಗಳಿಗೆ ಏಕಕಾಲಕ್ಕೆ ಬಾಂಬ್ ಬೆದರಿಕೆ ಬಂದಿರುವುದಕ್ಕೆ ದುರ್ಬಲ ನಾಯಕತ್ವವೇ ಕಾರಣ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಗೋವಿಂದ ಕಾರಜೋಳ (Govinda Karajola) ಗುಡುಗಿದರು.
ಧಾರವಾಡದಲ್ಲಿ (Dharawada) ಮಾತನಾಡಿದ ಅವರು, ಜನರನ್ನು ಎಲ್ಲೋ ಒಂದು ಕಡೆ ಭಯದ ವಾತಾವರಣದಲ್ಲಿ ಇಟ್ಟು ಆಡಳಿತ ಮಾಡುವ ಹುನ್ನಾರ ಇದಾಗಿದೆ. ಯಾವ ಕಾರಣಕ್ಕೂ ದೇಶದ್ರೋಹಿಗಳನ್ನು ಬಿಡಬಾರದು, ಮಟ್ಟಹಾಕಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಿಎಂ, ಡಿಸಿಎಂ ಉಗ್ರರಿಗೆ ಅಮಾಯಕರ ಪಟ್ಟ ಕಟ್ಟಿದ್ದಕ್ಕೆ ಬೆಂಗಳೂರಿಗೆ ಬಾಂಬ್ ಬೆದರಿಕೆ – ಬಿಜೆಪಿ ಕಿಡಿ
Advertisement
Advertisement
ಇಷ್ಟೊತ್ತಿಗೆ ಸರ್ಕಾರ ಆರೋಪಿಗಳನ್ನು ಬಂಧಿಸಬೇಕಾಗಿತ್ತು. ಆಡಳಿತದಲ್ಲಿ ಹಿಡಿತವಿಲ್ಲದ ಸರ್ಕಾರ ನಡೆಯುತ್ತಿದೆ. ಕೂಡಲೇ ದೇಶದ್ರೋಹಿ ಕೃತ್ಯದಲ್ಲಿ ಭಾಗಿಯಾಗಿರುವ ಈ ಆತಂಕವಾದಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
Advertisement
ಪಂಚರಾಜ್ಯ ಚುನಾವಣೆ ಕುರಿತು ಮಾತನಾಡಿ, ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಷ್ಟು ಬೆಳೆದಿಲ್ಲ. ಕಳೆದ ಭಾರಿಗಿಂತ ಈ ಸಲ ಬಿಜೆಪಿ ಮತಬ್ಯಾಂಕ್ ಹೆಚ್ಚಳವಾಗಿದೆ. ಛತ್ತೀಸಗಢದಲ್ಲಿ ಪ್ರಬಲ ಪೈಪೋಟಿ ಒಡ್ಡಿದ್ದೇವೆ. ಉಳಿದ ಕಡೆಗಳಲ್ಲಿ ನಾವು ಅಧಿಕಾರಕ್ಕೆ ಬರುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru Bomb Threat: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ
Advertisement
ಪಂಚರಾಜ್ಯಗಳ ಚುನಾವಣೆ ಲೋಕಸಭಾ ಚುನಾವಣೆಯ ದಿಕ್ಸೂಚಿ ಎನ್ನಲಾಗದು. ದೊಡ್ಡ ದೊಡ್ಡ ರಾಜ್ಯಗಳಲ್ಲಿ ಮತಬ್ಯಾಂಕ್ ಇರುತ್ತದೆ. ತೆಲಂಗಾಣದಲ್ಲೂ ಮತಬ್ಯಾಂಕ್ ಹೆಚ್ಚಳವಾಗಿದೆ. ದೇಶದ 30 ರಾಜ್ಯದಲ್ಲಿ ಬಿಜೆಪಿ ಪ್ರಬಲವಾಗಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೇಮಕ ಅಸಮಾಧಾನ ವಿಷಯ ಮುಗಿದು ಹೋದ ಅಧ್ಯಾಯ. ಆ ಕುರಿತು ನಾನು ಮಾತನಾಡುವುದಿಲ್ಲ. ರಾಜ್ಯಾಧ್ಯಕ್ಷರನ್ನು ನಾವೆಲ್ಲರೂ ಬೆಂಬಲಿಸಬೇಕು. ಎಲ್ಲರೂ ಸೇರಿ ಬಿಜೆಪಿ ಅಧಿಕಾರಕ್ಕೆ ಶ್ರಮಿಸೋಣ ಅಂತಷ್ಟೇ ಹೇಳುವೆ ಎಂದರು. ಇದನ್ನೂ ಓದಿ: ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ: ಮಧು ಬಂಗಾರಪ್ಪ