ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನ ಗುಡದೂರು ಬಳಿ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ 45 ವರ್ಷದ ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಇದನ್ನೂ ಓದಿ: ವಿಜಯಪುರ | ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವು
ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ ಇನ್ನೋರ್ವ ಗಾಯಾಳು ಶಿವರಾಜ್ ಸ್ಥಿತಿ ಗಂಭೀರವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಸ್ಥಳಕ್ಕೆ ಬಳಗಾನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಗಾನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಫ್ಯಾನ್ಸ್‌ಗೆ ಸಿಹಿಸುದ್ದಿ- ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಿದ ‘ಪುಷ್ಪ 2’ ಟೀಮ್