ಕೊಪ್ಪಳ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತನನ್ನು ಸಿದ್ದಾಪುರ ನಿವಾಸಿ ಮಂಜುನಾಥ, ಗಾಯಾಳುವನ್ನು ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟ ದರ್ಶನ್ ಬ್ಯಾನರ್ ತೆರವು – ಫ್ಯಾನ್ಸ್‌ಗೆ ಶಾಕ್
Advertisement
Advertisement
ಮರ್ಲಾನಹಳ್ಳಿ ಗ್ರಾಮದ ಬಳಿ ಮೃತ ಸಿದ್ದಾಪುರ ಹಾಗೂ ಖಾಸಿಂ ಸಾಬ್ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಸರ್ಕಾರಿ ಬಸ್ ಚಾಲಕ ಎದುರಿಗಿದ್ದ ಕಾರನ್ನು ಓವರ್‌ಟೆಕ್ ಮಾಡಲು ಹೋಗಿ, ಎದುರಿಗಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ – ‘ಡೆವಿಲ್’ ಸಿನಿಮಾದ ಟೀಸರ್ ರಿಲೀಸ್
Advertisement