ನವದೆಹಲಿ: ಹಣಕಾಸು ಬಜೆಟ್ ಇಂದೇ ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸ್ಪೀಕರ್ ಅವರ ಅನುಮತಿ ಪಡೆದು ಅರುಣ್ ಜೇಟ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಕಣ್ಣೂರು ಸಂಸದ ಇ.ಅಹ್ಮದ್ ನಿಧನರಾದ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯನ್ನು ಮುಂದೂಡಬೇಕೆಂದು ಕೇರಳ ಸಂಸದರು ಸ್ಪೀಕರ್ ಅವರಲ್ಲಿ ಮನವಿ ಮಾಡಿದ್ದರು. ಆದರೆ ಸರ್ಕಾರ ಬಜೆಟ್ ಮುಂದೂಡದೇ ಇಂದೇ ಮಂಡಿಸಲು ನಿರ್ಧಾರ ಕೈಗೊಂಡಿದೆ.
Advertisement
ಮಂಗಳವಾರದಂದು ಸಂಸತ್ ಅಧಿವೇಶನದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದ ಅಹ್ಮದ್ ಅವ್ರನ್ನ ದೆಹಲಿಯ ಆರ್‍ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸಂಸದ ಅಹ್ಮದ್ ಕೊನೆಯುಸಿರೆಳೆದಿದ್ದಾರೆ. ಅಹ್ಮದ್ ಸಾವಿನ ಸುದ್ದಿ ಕೇಳಿ ತಡರಾತ್ರಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿ ಅನೇಕರು ಆಸ್ಪತ್ರೆಗೆ ಭೇಟಿ ನೀಡಿದ್ರು.
Advertisement
ಅಹ್ಮದ್ ಅವರಿಗೆ 78 ವರ್ಷ ವಯಸ್ಸಾಗಿತ್ತು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷದಿಂದ ಸಂಸದರಾಗಿ ಆಯ್ಕೆ ಆಗಿದ್ರು. ಕೇಂದ್ರ ವಿದೇಶಾಂಗ ಸಚಿವರಾಗಿ ರಾಜ್ಯ ರೈಲ್ವೆ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ರು.