ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‍ಎಸ್‍ಎ) ಅಜಿತ್ ದೋವಲ್ ಅವರ ಕಾರ್ಯವನ್ನು 5 ವರ್ಷಗಳ ಕಾಲ ಮುಂದುವರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಕ್ಯಾಬಿನೆಟ್ ದರ್ಜೆಯ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ.
2014ರ ಮೇ 30 ರಂದು ಎನ್‍ಎಸ್‍ಎಗೆ ಅಜಿತ್ ದೋವಲ್‍ರನ್ನು ನೇಮಕ ಮಾಡಲಾಗಿತ್ತು. ಕಳೆದ ವರ್ಷ ನವೆಂಬರ್ ನಲ್ಲಿ ಅವರನ್ನು ಭಾರತದ ಸರ್ಕಾರದ ಚೀನಾದೊಂದಿನ ಗಡಿ ವಿವಾದ ಕುರಿತಂತೆ ವಿಶೇಷ ಪ್ರತಿನಿಧಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
Advertisement
Delhi: National Security Advisor Ajit Doval leaves from MHA. He has been given Cabinet rank in Government of India in recognition of his contribution in the national security domain. His appointment will be for five years. pic.twitter.com/jhTtkqSVUJ
— ANI (@ANI) June 3, 2019
Advertisement
ಸದ್ಯ ಮೋದಿ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರ ಖಾತೆ ನಿರ್ವಹಿಸುತ್ತಿರುವ ಮಾಜಿ ವಿದೇಶಾಂಗ ಕಾರ್ಯದರ್ಶಿಯಾಗಿರುವ ಎಸ್ ಜೈಶಂಕರ್ ಅವರೊಂದಿಗೆ ದೋವಲ್ ಕಾರ್ಯನಿರ್ವಹಿಸಿದ್ದರು. ಮುಖ್ಯವಾಗಿ ಡೋಕ್ಲಾಮ್ ಗಡಿ ವಿಚಾರದಲ್ಲಿ ಎರಡು ದೇಶಗಳ ನಡುವಿನ ಸಮಸ್ಯೆ ನಿವಾರಿಸಲು ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.
Advertisement
1968ರ ಬ್ಯಾಚ್‍ನ ಐಎಎಸ್ ಅಧಿಕಾರಿ ಆಗಿರುವ ದೋವಲ್ ಅವರು ಐಬಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ರು. ಅಲ್ಲದೇ 20196 ಉರಿ ದಾಳಿಗೆ ಪ್ರತಿಯಾಗಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮುಂದಾಳತ್ವ ವಹಿಸಿ, ಯಶಸ್ವಿಯಾಗಿ ಮುನ್ನಡೆಸಿದ್ದರು. ಅಲ್ಲದೇ ಪುಲ್ವಾಮಾ ದಾಳಿಯ ಬಳಿಕ ಬಾಲಕೋಟ್ ಏರ್ ಸ್ಟ್ರೈಕ್ ಕಾರ್ಯಾಚರಣೆಯ ಜವಾಬ್ದಾರಿ ವಹಿಸಿದ್ದರು.