ನವದೆಹಲಿ: ಭಾರತ ಸರ್ಕಾರವು ಜಾರಿ ನಿರ್ದೇಶನಾಲಯ(ಇಡಿ) ಮತ್ತು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳವರೆಗೆ ವಿಸ್ತರಿಸಿದೆ.
Advertisement
ಕೇಂದ್ರೀಯ ಸಂಸ್ಥೆಗಳ ಮುಖ್ಯಸ್ಥರು ಪ್ರಸ್ತುತ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಎರಡೂ ಸುಗ್ರೀವಾಜ್ಞೆಗೆ ಅಂಕಿತವನ್ನು ಹಾಕಿದ್ದಾರೆ. ಈ ಮೂಲಕ ಇಡಿ ಮತ್ತು ಸಿಬಿಐ ನಿರ್ದೇಶಕರ ಅಧಿಕಾರಾವಧಿ 5 ವರ್ಷಗಳವರೆಗೆ ವಿಸ್ತರಿಲಾಗಿದೆ ಎಂದು ವರದಿಗಳ ಪ್ರಕಾರ ತಿಳಿದುಬಂದಿದೆ. ಇದನ್ನೂ ಓದಿ: ಇಂದಿನಿಂದ ಶಬರಿಮಲೆ ಯಾತ್ರೆ ಆರಂಭ – 2 ಡೋಸ್ ಲಸಿಕೆ ಕಡ್ಡಾಯ
Advertisement
Advertisement
ಈ ಸುಗ್ರೀವಾಜ್ಞೆಯ ಪ್ರಕಾರ, ಉನ್ನತ ಏಜೆನ್ಸಿಗಳ ಮುಖ್ಯಸ್ಥರು ತಮ್ಮ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ, ತಮ್ಮ ಅಧಿಕಾರವನ್ನು ಮೂರು ವರ್ಷಗಳವರೆಗೆ ವಿಸ್ತರಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.